Mitchell Marsh: ಆಸ್ಟ್ರೇಲಿಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು 6ನೇ ಬಾರಿ ಟ್ರೋಫಿ ಎತ್ತಿ ಹಿಡಿಯಿತು.. ಹೀಗಿರುವಾಗಲೇ ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟು ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಪೋಟೋಗೆ ಪೋಸ್ ನೀಡಿದ್ದಾರೆ.. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ..
ICC Cricket World Cup 2023: ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, 'ನ.19ರಂದು ಭಾರತ-ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 291 ರನ್ ಗಳಿಸಿ ಆಸ್ಟ್ರೇಲಿಯಾಕ್ಕೆ ಗೆಲ್ಲಲು 292 ರನ್ ಗುರಿ ನೀಡಿತು. ಅಫ್ಘಾನಿಸ್ತಾನ ಪರ ಇಬ್ರಾಹಿಂ ಝದ್ರಾನ್ 129 ರನ್ಗಳ ಗರಿಷ್ಠ ಸ್ಕೋರ್ ಗಳಿಸಿದರೆ, ರಶೀದ್ ಖಾನ್ 18 ಎಸೆತಗಳಲ್ಲಿ 35 ರನ್ ಗಳಿಸಿದರು. ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಆಸ್ಟ್ರೇಲಿಯಾ ಪರ ಗರಿಷ್ಠ 2 ವಿಕೆಟ್ ಪಡೆದರು. ಆದರೆ, ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಆಡಮ್ ಝಂಪಾ ತಲಾ 1 ವಿಕೆಟ್ ಪಡೆದರು. 292 ರನ್ಗಳ ಗುರಿಗೆ ಉತ್ತರವಾಗಿ ಆಸ್ಟ್ರೇಲಿಯಾ ತಂಡ 46.5 ಓವರ್ಗಳಲ್ಲಿ 293 ರನ್ ಗಳಿಸಿ 3 ವಿಕೆಟ್ಗಳಿಂದ ಜಯ ಸಾಧಿಸಿತು. ವಿಶೇಷವೇನೆಂದರೆ ಮ್ಯಾಕ್ಸ್ವೆಲ್ ಒಬ್ಬರೇ ಅಜೇಯ 201 ರನ್ ಗಳಿಸುವ
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯನ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನ್ಯೂಜಿಲೆಂಡ್ ವಿರುದ್ಧ 190 ರನ್ ಗಳ ಗೆಲುವು ಸಾಧಿಸಿದೆ.
ಭಾರತ ನೆಲದಲ್ಲಿ ನಡೆದ 2011ರ ವಿಶ್ವಕಪ್ ಯಾರು ಮರೆಯೋಕೆ ಸಾಧ್ಯ ಹೇಳಿ.. ಧೋನಿ ಹೊಡೆದ ಆ ಕೊನೆಯ ಸಿಕ್ಸ.. ಗೌತಮ್ ಗಂಭೀರ ಸೂಪರ್ ಬ್ಯಾಟಿಂಗ್... ಯುವರಾಜ್ ಸಿಂಗ್ ಕೆಚ್ಚೆದೆಯ ಆಲ್ರೌಂಡರ್ ಆಟ... ಸಚಿನ್ಗೆ ಸಿಕ್ಕ ಗೌರವ.. ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದೆ. ಈಗ ಅದೇ ಕ್ಷಣವನ್ನು ಮತ್ತೆ ನಿರ್ಮಿಸಲು ಟೀಂ ಇಂಡಿಯಾ ಪಣತೊಟ್ಟಿದ್ದು ಸತತ 6 ಗೆಲುವಿನೊಂದಿಗೆ ಮುನ್ನುಗ್ಗುತ್ತಿದೆ, ಅದರಲ್ಲೂ ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿ ದಸರಾ ಸಂಭ್ರಮ ಹೆಚ್ಚುಮಾಡಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್, ಬಾಂಗ್ಲಾದೇಶ, ಅಫ್ಗಾನಿಸ್ತಾನ ತಂಡಕ್ಕೂ ನೀರು ಕುಡಿಸಿ ಸುಲಭ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ರಾಜನಂತೆ ಮೆರೆಯುತ್ತಿದೆ.
ICC Cricket World Cup 2023: ಬಾಂಗ್ಲಾದೇಶದ ವಿರುದ್ಧ ಅಜೇಯ 103 ರನ್ ಗಳಿಸಿದ್ದ ಕೊಹ್ಲಿ, ನ್ಯೂಜಿಲ್ಯಾಂಡ್ ವಿರುದ್ಧ 95, ಆಸ್ಟ್ರೇಲಿಯಾ ವಿರುದ್ಧ 85, ಅಫ್ಘಾನಿಸ್ತಾನದ ವಿರುದ್ಧ 55 ಮತ್ತು ಪಾಕಿಸ್ತಾನದ ವಿರುದ್ಧ 16 ರನ್ ಗಳಿಸಿದ್ದಾರೆ.
ICC Cricket World Cup 2023 Points Table: ಭಾರತ ತಂಡವು ನ್ಯೂಜಿಲೆಂಡ್’ನ್ನು ಸೋಲಿಸುವ ಮೂಲಕ ವಿಶ್ವಕಪ್ 2019ರ ಸೆಮಿಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಅಲ್ಲದೆ ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
India vs New Zealand Updates : 2019ರ ವಿಶ್ವಕಪ್ ಸೆಮಿ ಫೈನಲ್ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದ ಕಿವೀಸ್ ವಿರುದ್ದ ಸೇಡು ತೀರಿಸಿಕೊಳ್ಳು ಭಾರತ ತಂಡ ಕಾಯುತ್ತಿದೆ. ವಿಶ್ವಕಪ್ 2023ರ 21ನೇ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಡೆಯಲಿದೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ನ ಈ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಪ್ರಸ್ತುತ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಅನ್ನು 229 ರನ್ಗಳಿಂದ ಸೋಲಿಸಿತು.ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಹೆನ್ರಿಕ್ ಕ್ಲಾಸೆನ್ ಸ್ಪೋಟಕ ಶತಕ ಬಾರಿಸಿದರೆ ಇತ್ತಕಡೆ ಬೌಲಿಂಗ್ ನಲ್ಲಿ ಜೆರಾಲ್ಡ್ ಕೊಯೆಟ್ಜಿ 4 ಓವರ್ಗಳಲ್ಲಿ 35 ರನ್ ನೀಡಿ 3 ವಿಕೆಟ್ ಪಡೆದರು.
ಆಸ್ಟ್ರೇಲಿಯಾದ ದಂತಕಥೆ ಡೇವಿಡ್ ವಾರ್ನರ್ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ತಾವೊಬ್ಬ ಶ್ರೇಷ್ಠ ಆರಂಭಿಕ ಆಟಗಾರ ಎನ್ನುವುದನ್ನು ಅವರು ಮತ್ತೊಮ್ಮೆ ಸಾಬೀತುಪಡಿಸಿದರು.
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯನ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಶ್ರೀಲಂಕಾ ವಿರುದ್ಧದ ಪಂದ್ಯದಿಂದ ಪ್ಯಾಟ್ ಕಮ್ಮಿನ್ಸ್ ಹೊರಗುಳಿಯಬೇಕು ಎಂಬ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಹೇಳಿಕೆಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ತಿರುಗೇಟು ನೀಡಿದ್ದಾರೆ. ಕ್ಲಾರ್ಕ್ ಹೇಳಿಕೆ ಆಶ್ಚರ್ಯ ತರಿಸಿದೆ. ಆದರೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ತಂಡದಲ್ಲಿ ಬದಲಾವಣೆ ಸಾಧ್ಯತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಆಸೋಶಿಯನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 38 ರನ್ ಗಳ ಗೆಲುವು ಸಾಧಿಸಿದೆ.
ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡವು ಹಾಲಿ ವಿಶ್ವಚಾಂಪಿಯನ್ ಇಂಗ್ಲೆಂಡ್ ತಂಡವನ್ನು 69 ರನ್ ಗಳಿಂದ ಸೋಲಿಸುವ ಮೂಲಕ ಐತಿಹಾಸಿಕ ಗೆಲುವನ್ನು ಕಂಡಿದೆ.
2023 ರ ವಿಶ್ವಕಪ್ನಲ್ಲಿ ಅಹಮದಾಬಾದ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ಗೆಲುವಿಗೆ ಸಾಕ್ಷಿಯಾದ ಅನೇಕ ಸೆಲೆಬ್ರಿಟಿಗಳಲ್ಲಿ ಊರ್ವಶಿ ರೌಟೇಲಾ ಒಬ್ಬರು.ಈಗ ಪಂದ್ಯ ಮುಗಿದ ಒಂದು ದಿನದ ನಂತರ, ಅಕ್ಟೋಬರ್ 15 ರಂದು, ಊರ್ವಶಿ ಅವರು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಮ್ಮ 24 ಕ್ಯಾರೆಟ್ ನಿಜವಾದ ಚಿನ್ನದ ಐಫೋನ್ ಕಳೆದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ನವದೆಹಲಿ: ವಿಶ್ವಕಪ್ನಲ್ಲಿ ಭಾರತದ ವಿರುದ್ಧ ನೀರಸ ಪ್ರದರ್ಶನ ನೀಡಿದ ಪಾಕಿಸ್ತಾನವನ್ನು ಮಾಜಿ ನಾಯಕ ರಮೀಜ್ ರಾಜಾ ಟೀಕಿಸಿದ್ದಾರೆ ಮತ್ತು ಸೋಲನ್ನು ನೋಯಿಸುವ ಗಾಯಎಂದು ಬಣ್ಣಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.