IPL 2024 : ಸುಮಾರು ಎರಡು ತಿಂಗಳಿನಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುತ್ತಿರುವ ಐಪಿಎಲ್ ಕೊನೆಯ ಹಂತ ತಲುಪಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ ಟಾಲಿವುಡ್ ತಾರೆಯರ ವಿಶೇಷ ಶುಭಾಶಯಗಳನ್ನು ತಿಳಿಸಿದ್ದಾರೆ.
IPL : ಐಪಿಎಲ್ 2024ರ 73ನೇ ಪಂದ್ಯ, ಇಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದ್ದು, ಟಾಸ್ ಗೆದ್ದು ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
CSK vs GT IPL 2023 Final: ಮೀಸಲು ದಿನದಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಆದರೆ, ಮೀಸಲು ದಿನದಂದು ಹೆಚ್ಚು ಮಳೆಯಾಗುವ ಸಾಧ್ಯತೆ ಕಂಡುಬಂದಿಲ್ಲ. ಸೋಮವಾರ, ಅಹಮದಾಬಾದ್ ನಲ್ಲಿ ಹಗಲಿನಲ್ಲಿ ಬಿಸಿಲು ಇರಲಿದ್ದು, ಸಂಜೆ ಹವಾಮಾನದಲ್ಲಿ ಬದಲಾವಣೆಯನ್ನು ಕಾಣಬಹುದು.
Chennai Super Kings Probable Playing-11: ಚೆನ್ನೈ ಸೂಪರ್ ಕಿಂಗ್ಸ್ ನ ಆರಂಭಿಕ ಬ್ಯಾಟ್ಸ್ ಮನ್ ಗಳು ಈ ಸೀಸನ್ ನಲ್ಲಿ ತಂಡಕ್ಕೆ ಒಂದಲ್ಲ, ಹಲವು ಬಾರಿ ಉತ್ತಮ ಆರಂಭವನ್ನು ನೀಡಿದ್ದಾರೆ. ಡೆವೊನ್ ಕಾನ್ವೇ ಮತ್ತು ರಿತುರಾಜ್ ಗಾಯಕ್ವಾಡ್ ಇಬ್ಬರೂ ಮಾರಕ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಈ ಇಬ್ಬರು ಬ್ಯಾಟ್ಸ್ಮನ್ ಗಳು ಆರಂಭಿಕ ಜೋಡಿಯಾಗಿ ಫೈನಲ್ ಗೆ ಪ್ರವೇಶಿಸಬಹುದು.
CSK vs GT IPL 2023 Final: ಪ್ಲೇ ಆಫ್ ಪಂದ್ಯಗಳು ಮತ್ತು ಅಂತಿಮ ಪಂದ್ಯಗಳ ನಿಯಮಗಳು ವಿಭಿನ್ನವಾಗಿರುತ್ತವೆ. ಮತ್ತೊಂದೆಡೆ, ಐಪಿಎಲ್ ನಲ್ಲಿ ಲೀಗ್ ಸುತ್ತಿನಲ್ಲಿ ಪಂದ್ಯವನ್ನು ರದ್ದುಗೊಳಿಸಿದರೆ, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗುತ್ತದೆ. ಹೀಗಿರುವಾಗ ಮಳೆಯಿಂದಾಗಿ ಕ್ವಾಲಿಫೈಯರ್ ರದ್ದಾದರೆ ಯಾವ ತಂಡ ಈ ಬಾರಿ ಚಾಂಪಿಯನ್ ಆಗಲಿದೆ ಎಂಬ ಪ್ರಶ್ನೆ ಹಲವು ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಮೂಡಿದೆ.
Gujarat Titans vs Chennai Super Kings Final: ಐಪಿಎಲ್ 2023 ರ ಅಂತಿಮ ಪಂದ್ಯವು ಪ್ರತಿಷ್ಠಿತ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮಹಾನ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ಮುಖಾಮುಖಿಯಾಗಲಿವೆ. ಕ್ವಾಲಿಫೈಯರ್-1ರಲ್ಲೂ ಉಭಯ ತಂಡಗಳು ಮುಖಾಮುಖಿಯಾಗಿದ್ದವು.
IPL Final 2023, GT vs CSK: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2023ರ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ಅಹಮದಾಬಾದ್ ಪೊಲೀಸರು ಟಿಕೆಟ್ ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡುವ ಎಚ್ಚರಿಕೆಯನ್ನು ನೋಟಿಸ್ ನೀಡಿದ್ದಾರೆ.
ಪಂದ್ಯಾವಳಿ ಮಾರ್ಚ್ 31, 2023 ರಂದು ಆರಂಭಗೊಂಡಿದೆ ಮತ್ತು ಪಂದ್ಯಾವಳಿಯ ಅಂತಿಮ ಪಂದ್ಯ ಮೇ 28 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದುವರೆಗೆ ಐಪಿಎಲ್ನಲ್ಲಿ 28 ಪಂದ್ಯಗಳು ನಡೆದಿದ್ದು, ಪ್ರತಿ ಪಂದ್ಯ ಒಂದಕ್ಕಿಂತ ಒಂದು ರೋಚಕವಾಗಿ ಅಂತ್ಯಕಂಡಿವೆ. ಈ ನಡುವೆ ಬಿಸಿಸಿಐ ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.
ಐಪಿಎಲ್ ಇತಿಹಾಸದಲ್ಲಿಯೇ ಬರೋಬ್ಬರಿ ಒಂದು ಲಕ್ಷದ 20 ಸಾವಿರ ಅಭಿಮಾನಿಗಳು ವೀಕ್ಷಿಸಲಿದ್ದಾರೆ. ಅಷ್ಟೇ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರವರೂ ಸಹ ವೀಕ್ಷಿಸಲಿದ್ದಾರೆ ಎಂಬ ನಿರೀಕ್ಷೆಯಿದೆ. ಇನ್ನು ಐಪಿಎಲ್ ಫೈನಲ್ ಪ್ರಾರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ನಡೆಯಲಿದೆ.
ಮಾಹಿತಿ ಪ್ರಕಾರ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 6:30ಕ್ಕೆ ಆರಂಭವಾಗಲಿದ್ದು, 50 ನಿಮಿಷಗಳ ಕಾಲ ನಡೆಯಲಿದೆ. ಹೀಗಾಗಿ, 7:30ಕ್ಕೆ ಟಾಸ್ ನಡೆಯಲಿದ್ದು, 30 ನಿಮಿಷಗಳ ನಂತರ ಪಂದ್ಯ ಆರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.