ಅಂದಹಾಗೆ 'ಜೇಮ್ಸ್' ಚಿತ್ರ ರಿಲೀಸ್ಗೂ ಮುನ್ನ ಚಿತ್ರತಂಡ ಹಲವಾರು ಸರ್ಪ್ರೈಸ್ ಕೊಡುತ್ತಿದೆ. ಈ ಚಿತ್ರದ ಬಗ್ಗೆ ಈಗಾಗಲೇ ಚಿತ್ರತಂಡ ಸಾಕಷ್ಟು ಅಪ್ಡೇಟ್ಸ್ ನೀಡಿದೆ. ಇದೀಗ ಮತ್ತೊಂದು ಸರ್ಪ್ರೈಸ್ ಸಿಕ್ಕಿದೆ. ಇದು ಪ್ರೇಕ್ಷಕರು ಹಾಗೂ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದೆ.
ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ವಿಶ್ವದಾದ್ಯಂತ ಜೇಮ್ಸ್ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರು ತಿಳಿಸಿದ್ದಾರೆ.ಚಿತ್ರದ ಬಿಡುಗಡೆಗೂ ಮುನ್ನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಶ್ವವ್ಯಾಪಿ 4500 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಜೇಮ್ಸ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.
ನಿನ್ನೆ ಬೆಳಗ್ಗೆ 11 ಗಂಟೆ 11 ನಿಮಿಷಕ್ಕೆ ಯೂಟ್ಯೂಬ್ ನಲ್ಲಿ 'ಜೇಮ್ಸ್' ಸಿನಿಮಾದ 'ಟ್ರೇಡ್ ಮಾರ್ಕ್' ಹಾಡು ರಿಲೀಸ್ ಆಗಿದ್ದು, ಕೆಲವೇ ಗಂಟೆಗಳ ಅಂತರದಲ್ಲಿ 5 ಮಿಲಿಯನ್ ವೀವ್ಸ್ ಗಿಟ್ಟಿಸಿಕೊಂಡಿದೆ . ಜೊತೆಗೆ ಲೈಕ್ ಗಳ ವಿಚಾರದಲ್ಲೂ ಅಪ್ಪು ಹಾಡು ಹೊಸ ದಾಖಲೆ ಬರೆದಿದ್ದು, ಫ್ಯಾನ್ಸ್ ಈ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ.
James Trademark Song: ಕನ್ನಡ ಭಾಷೆಯ ಜೊತೆಗೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲೂ 'ಜೇಮ್ಸ್' ಸಿನಿಮಾದ 'ಟ್ರೇಡ್ ಮಾರ್ಕ್' ಹಾಡು ರಿಲೀಸ್ ಆಗಿದ್ದು, ಯೂಟ್ಯೂಬ್ ನಲ್ಲಿ ಹವಾ ಎಬ್ಬಿಸಿದೆ.
James Trademark Song: ಜೇಮ್ಸ್ ಗ್ಲಿಂಪ್ಸ್ ಜೊತೆ ಲಿರಿಕಲ್ ಸಾಂಗ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಪ್ರಮೋಷನಲ್ ಸಾಂಗ್ ನಲ್ಲಿ ರಚಿತಾ ರಾಮ್, ಆಶಿಕಾ ರಂಗನಾಥ್, ಶ್ರೀ ಲೀಲಾ ಹೆಜ್ಜೆ ಹಾಕಿದ್ದಾರೆ. ಹಾಗೇ ಚರಣ್ ರಾಜ್, ಚಂದನ್ ಶೆಟ್ಟಿ, ಕೋರಿಯೋಗ್ರಫರ್ ಮೋಹನ್ ಕಾಣಿಸಿಕೊಂಡಿದ್ದಾರೆ.
James Song Release: ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ 'ಜೇಮ್ಸ್' (James) ಸಿನಿಮಾದ ಟೀಸರ್ ಎಲ್ಲೆಲ್ಲೂ ಹವಾ ಎಬ್ಬಿಸಿತ್ತು. ಅಲ್ಲದೆ ಹಲವು ದಾಖಲೆಗಳನ್ನೂ 'ಜೇಮ್ಸ್' ಸಿನಿಮಾದ ಟೀಸರ್ ಪುಡಿ ಪುಡಿ ಮಾಡಿದೆ. ಇದೀಗ 'ಜೇಮ್ಸ್' ಸಿನಿಮಾದ 'ಟ್ರೇಡ್ ಮಾರ್ಕ್' ಹಾಡು ರಿಲೀಸ್ ಆಗುತ್ತಿದ್ದು, ಅಪ್ಪು ಅಭಿಮಾನಿಗಳ ಸಂಭ್ರಮ ದುಪ್ಪಟ್ಟಾಗಿದೆ.
ಹಿಂದೆಂದೂ ಈ ರೀತಿ ಸಿನಿಮಾ ರಿಲೀಸ್ ಆಗಿರಬಾರದು.. ಮುಂದೆ ಕೂಡ ಅಂತಹ ರಿಲೀಸ್ ನೋಡಿರಬಾರದು. ಯಾಕಪ್ಪಾ ಈ ಡೈಲಾಗ್ ಅಂದ್ರೆ, ಅಪ್ಪು ಅಭಿನಯದ ಕೊನೇ ಸಿನಿಮಾ ಬಿಡುಗಡೆ ಮಾಡೋದಕ್ಕೆ ಅಭಿಮಾನಿ ಬಳಗ ನಡೆಸಿರುವ ತಯಾರಿ ಹಾಗಿದೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ಚಿತ್ರತಂಡ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
James Movie Teaser: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ 'ಜೇಮ್ಸ್' ಸಿನಿಮಾಗಾಗಿ ಎಲ್ಲರೂ ಕಾತುರರಾಗಿದ್ದಾರೆ. ಅಪ್ಪು ಅವರ ಕೊನೆಯ ಸಿನಿಮಾ 'ಜೇಮ್ಸ್' ಅಧಿಕೃತ ಟೀಸರ್ ಬಿಡುಗಡೆ ಡೇಟ್ ಫಿಕ್ಸ್ ಆಗಿದೆ.
ಜೇಮ್ಸ್ ರಿಲೀಸ್ ಆಗುವ ದಿನ ಅಪ್ಪು ಚಿತ್ರವನ್ನು ಮಾತ್ರ ಪ್ರದರ್ಶನ ಮಾಡಲು ಸಿದ್ಧತೆ ನಡೆದಿದೆ. ಈ ಬಗ್ಗೆ ಜೇಮ್ಸ್ ಚಿತ್ರದ ವಿತರಕ ಧೀರಜ್ ಮಾಹಿತಿ ನೀಡಿದ್ದಾರೆ. ಹಾಗೇ ಅಪ್ಪು ಸಿನಿಮಾ ರಿಲೀಸ್ ಆಗುವ ದಿನ ಪರಭಾಷೆ ಚಿತ್ರಗಳಿಗೆ ಕೊಕ್ ನೀಡುವ ಸಾಧ್ಯತೆ ಇದೆ.
'ಜೇಮ್ಸ್' ಚಿತ್ರದ ಪೋಸ್ಟರ್ ರಿಲೀಸ್ ಆಗಿರುವುದು ಒಂದೆಡೆ ಸಂಭ್ರಮದ ವಾತಾವರಣ ಸೃಷ್ಟಿಸಿದ್ದರೆ, ಮತ್ತೊಂದೆಡೆ ಅಪ್ಪು ಅವರನ್ನು ನೆನೆದು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 'ಅಪ್ಪು ನೀವು ನಮ್ಮೊಂದಿಗೆ ಇರಬೇಕಿತ್ತು' ಎಂದು ಅಭಿಮಾನಿಗಳು ಭಾವುಕರಾಗಿ ಪೋಸ್ಟ್ ಹಾಕುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.