ಅವರೆಲ್ಲ ಸರ್ಕಾರಿ ಟೀಚರ್ ನೌಕರಿ ಆಕಾಂಕ್ಷಿಗಳು.. ನೇಮಕಾತಿ ತಾತ್ಕಾಲಿಕ ಪಟ್ಟಿಯಲ್ಲಿಯೂ ಆಯ್ಕೆಯಾಗಿದ್ದರು. ಇನ್ನೇನೂ ಸರ್ಕಾರಿ ನೌಕರಿ ಸಿಕ್ತು ಅಂತಾ ಖುಷಿ, ಖುಷಿಯಲ್ಲಿದ್ರು. ಆದ್ರೆ ಆದಾಯ ಪ್ರಮಾಣ ಪ್ರತ ಕಾರಣ ನೀಡಿ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನ ಫೈನಲ್ ಪಟ್ಟಿಯಿಂದ ಕೈಬಿಟ್ಟಿದ್ದು ಆಘಾತ ಉಂಟು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಗರಂ ಆಗಿರೋ ಅಭ್ಯರ್ಥಿಗಳು ಕಾನೂನು ಸಮರಕ್ಕೆ ಸಜ್ಜಾಗ್ತಿದ್ದಾರೆ.
ಜಾಗತಿಕ ಬಂಡವಾಳ ಹೂಡಿಕೆ ಸಂಬಂಧ ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರಾಣಿ ಅವರು, ಕಲಬುರಗಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಭಾನುವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಜಿಲ್ಲೆಯ ಸಮಗ್ರ ಚಿತ್ರಣ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು ಕೆಲವು ಸೂಚನೆಗಳನ್ನು ನೀಡಿದ್ದಾರೆ.
ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಆ ಏರಿಯಾ ಏನು ಪಾಕಿಸ್ತಾನದಲ್ಲಿ ಇದೆಯಾ..? ಆ ಏರಿಯಾ ಏನು ಅಫ್ಘಾನಿಸ್ತಾನದಲ್ಲಿ ಇದೆಯಾ..? ಪದೇ ಪದೆ ಹಿಂದೂ ನಾಯಕರ ಟಾರ್ಗೆಟ್ ಮಾಡೋದನ್ನ ಜನ ಸಹಿಸ್ತಿಲ್ಲ ಎಂದು ಆರ್.ಅಶೋಕ್ ಹೇಳಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ. ಈ ಪ್ರಕರಣ ಖಂಡಿಸಿ 26ಕ್ಕೆ ಕೊಡಗು ಚಲೋ ಮಾಡ್ತೀವಿ. ಮುತ್ತಿಗೆ ವೇಳೆ ನಮಗೆ ಯಾರು ಟಚ್ ಮಾಡ್ತಾರೆ ನೋಡೋಣ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಆರ್.ಅಶೋಕ್ ಟಾಂಗ್ ಕೊಟ್ಟಿದ್ದಾರೆ.
ಲಿಂಗಾಯತ ಧರ್ಮ ಒಡೆಯುವ ಕೆಲಸಕ್ಕೆ ಯಾರೂ ಕೈ ಹಾಕಿರಲಿಲ್ಲ. ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ ವೇಳೆ ಮನಸ್ತಾಪ ಉಂಟಾಗಿತ್ತು ಎಂದು ಕಲಬುರಗಿಯಲ್ಲಿ ಮಾಜಿ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಕಲಬುರಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಆಳಂದ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ನಿಂಬರಗ- ಸ್ಟೇಷನ್ ಗಾಣಗಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇನ್ನು ಹಳ್ಳ ದಾಟಲು ಹೋದ ವ್ಯಕ್ತಿಯೋರ್ವ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಆತನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡದ ಮುಲ್ಕಿ, ಮೂಡಬಿದಿರೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಉಡುಪಿ, ಕಾರ್ಕಳ, ಕೋಟಾ, ಸಿದ್ದಾಪುರದಲ್ಲೂ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
ಸಡಗರ ಸಂಭ್ರಮದಿಂದ ಕಾರ ಹುಣ್ಣುಮೆ ಆಚರಣೆ ಮಾಡಲಾಯಿತು. ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿ ಅದ್ಧೂರಿಯಾಗಿ ಕಾರ ಹುಣ್ಣಿಮೆ ಆಚರಿಸಲಾಯಿತು. ಎತ್ತುಗಳಿಗೆ ಬಣ್ಣ ಬಣ್ಣದ ಅಲಂಕಾರ ಮಾಡಲಾಗಿತ್ತು.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 2022ರ ಜೂನ್ 3 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಆಯ್ಕೆಯಾದವರ ವಿರುದ್ಧ ಕ್ರಮ ಜರುಗಿಸಬೇಕು.. ಆದ್ರೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಯಾರೋ ಕೆಲವ್ರು ಮಾಡಿದ ಆಕ್ರಮದಿಂದ ಪ್ರಾಮಾಣಿಕರಿಗೆ ತೊಂದರೆ ಆಗ್ತಿದೆ ಅಂತಾ ಅಸಮಾಧಾನ ಹೊರ ಹಾಕಿದ್ದಾರೆ.
ಅಮರ್ಜಾ ಯೋಜನೆಯ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗಿ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಬರುತ್ತಿದೆ.ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ.ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಯಾವುದೇ ಕ್ಷಣದಲ್ಲಿ ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐ.ಪಿ.ಸಿ. ವಿಭಾಗ ನಂ.1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿ ಹದಗೆಟ್ಟ ರಸ್ತೆಗಳ ದುರಸ್ತಿ, ಹೊಸ ಸಿ.ಸಿ.ರಸ್ತೆ ನಿರ್ಮಾಣ, ಉದ್ಯಾನವನ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ಸಮರ್ಪಕ ವಿದ್ಯುತ್ ವ್ಯವಸ್ಥೆ ಮತ್ತು ನೈರ್ಮಲೀಕರಣ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಕಲಬುರಗಿಯನ್ನು ಸುಂದರ ಮತ್ತು ಮಾದರಿ ನಗರವನ್ನಾಗಿ ನಿರ್ಮಿಸಲಾಗುವುದು. ಇದಕ್ಕಾಗಿ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಗಳು ಅಶ್ವಾಸನೆ ನೀಡಿದ್ದಾರೆ ಎಂದು ರಾಜ್ಯದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದರು.
ಹದಿನಾಲ್ಕು ವರ್ಷಗಳ ಜೈಲುವಾಸದ ನಂತರವೂ ಕೂಡ ವೈದ್ಯರಾಗಬೇಕೆಂಬ ತಮ್ಮ ಕನಸನ್ನು ಈಡೇರಿಸುವಲ್ಲಿ ಸುಭಾಷ್ ಪಾಟೀಲ್ ಯಶಸ್ವಿಯಾಗಿದ್ದಾರೆ.1997 ರಲ್ಲಿ ಎಂಬಿಬಿಎಸ್ ಮಾಡುವಾಗ ಕಲಬುರಗಿಯ ಅಫ್ಜಲ್ಪುರದ 40 ವರ್ಷದ ವ್ಯಕ್ತಿಯನ್ನು ಕೊಲೆ ಪ್ರಕರಣವೊಂದರಲ್ಲಿ ಬಂಧಿಸಲಾಯಿತು.
ರಾಜ್ಯದ ಹೈ ಪ್ರೊಫೈಲ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ತೆಲುಗು ನಟಿ ವಿಜಯಶಾಂತಿ ಅವರನ್ನು ಕರೆತರಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.