ಸಾಯಿ ಸರ್ವೇಶ್ ಸಾಹಿತ್ಯ ಚೇತನ್ ಕೃಷ್ಣ ಸಂಗೀತ ಹೊಂದಿರುವ "ಹೇ ಮಂದಾರ" ಹಾಡಿಗೆ ಅಜಯ್ ವಾರಿಯರ್ ಧ್ವನಿಯಾಗಿದ್ದಾರೆ. ಉತ್ತರ ಪ್ರದೇಶದ ಸುಂದರ ಸ್ಥಳಗಳಲ್ಲಿ ಚಿತ್ರೀಕರಣಗೊಂಡ ಹಾಡಿಗೆ ಬಿ. ಧನಂಜಯ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ.
ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡ ಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಅವಾರ್ಡ್ ಲೋಗೋ ಬಿಡುಗಡೆ ಮಾಡಲಾಗಿದೆ. ನಾಡಿನ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೋ ಲಾಂಚ್ ಮಾಡಿ ಶುಭ ಕೋರಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.
ಕರುನಾಡ ಶೋಕ್ದಾರ್ ಅಂತ ಹೆಸರುವಾಸಿ ಆಗಿರುವ ಧನ್ವೀರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯುವ ನಿರ್ದೇಶಕ ರಘುಕುಮಾರ್ ಓ ಆರ್ ನಿರ್ದೇಶಿಸುತ್ತಿದ್ದಾರೆ. ಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.
ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದ ಶುಭ ಘಳಿಗೆಯಲ್ಲಿ ಅಶೋಕ್ ಕಡಬ ನಿರ್ದೇಶನದ `ನಿಂಬಿಯಾ ಬನದ ಮ್ಯಾಗ’ ಚಿತ್ರದ ಫಸ್ಟ್ ಲುಕ್ ಟೀಸಲ್ ಬಿಡುಗೆಗೊಂಡಿದೆ. ಅದರಲ್ಲಿ ತೆರೆದುಕೊಂಡ ಸುಂದರ ದೃಷ್ಯಾವಳಿ, ಸಂವೇದನಾಶೀಲ ಕಥೆಯ ಸುಳಿವು ಕಂಡೇ ಪ್ರೇಕ್ಷಕರನೇಕರು ಥ್ರಿಲ್ ಆಗಿದ್ದಾರೆ ಜನಪ್ರಿಯ ಧಾಟಿಯ ಸಿನಿಮಾಗಳ ರಾಟೆಯ ನಡುವೆ, ಆಗಾಗ ಪ್ರೇಕ್ಷಕರು ತಂಗಾಳಿ ತೀಡಿದಂಥಾ ಕಥೆಯನ್ನು ಕನವರಿಸುತ್ತಾರೆ. ಕುಟುಂಬ ಸಮೇತರಾಗಿ ಕೂತು ನಡುವ ಸಂಭ್ರಮವನ್ನು ಎದುರು ನೋಡುತ್ತಾರೆ. ಅದೆಲ್ಲವೂ ನಿಂಬಿಯಾ ಬನಾದ ಮ್ಯಾಗ ಚಿತ್ರದ ಮೂಲಕ ಸಿಗುವ ಭರವಸೆಯೊಂದು ಇದೀಗ ಮೂಡಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.