ರಾಜ್ಯವು ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈಗ ಅವರು ಎಂಟು ಪ್ರಶ್ನೆಗಳನ್ನು ನಡ್ದಾ ಎದುರು ಇಟ್ಟಿದ್ದಾರೆ.
ಯಾರು ಏನಾದರೂ ಹೇಳಿಕೊಳ್ಳಲಿ. ಅಲ್ಪಸಂಖ್ಯಾತರೂ ಸೇರಿದಂತೆ ನಮ್ಮ ಪಕ್ಷಕ್ಕೆ ಎಲ್ಲಾ ಸಮುದಾಯದವರು ಬೇಕು. ರಾಜ್ಯದಲ್ಲಿ ಶೇ.99ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka Assembly Elections 2023: ವರುಣಾ ಕ್ಷೇತ್ರದಲ್ಲಿ 55 ಸಾವಿರ ಲಿಂಗಾಯಿತ ಮತದಾರರಿದ್ದಾರೆ. ಕುರುಬರು 35 ಸಾವಿರ, ಪರಿಶಿಷ್ಟ ಜಾತಿ 43 ಸಾವಿರ, ಪರಿಶಿಷ್ಟ ಪಂಗಡ 23 ಸಾವಿರ, ಒಕ್ಕಲಿಗರು 12 ಸಾವಿರ ಹಾಗೂ ಇತರ ಹಿಂದುಳಿದ ವರ್ಗಗಳ ಸಮುದಾಯದವರು 12 ಸಾವಿರ ಇದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮುಂದಿನ ತಿಂಗಳ ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಘೋಷಿಸಿತು.ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜನತಾ ದಳ ಯುನೈಟೆಡ್ (ಜೆಡಿಯು) ತ್ರಿಕೋನ ಸ್ಪರ್ಧೆಯಲ್ಲಿ ಸಿಲುಕಿರುವ ಪ್ರದೇಶಗಳಲ್ಲಿ ಎನ್ಸಿಪಿ 40-45 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದೆ.
ಸವದಿ ಎಲ್ಲಿ ಇರುತ್ತಾನೋ ನಿಷ್ಠೆ ಅಲ್ಲಿರುತ್ತದೆ. ನನಗೆ ಹೊಂದಾಣಿಕೆ ರಾಜಕೀಯ ಗೊತ್ತಿಲ್ಲ. ನಾನು ಇರುವ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ಪಕ್ಷಕ್ಕೆ ಬರಮಾಡಿಕೊಂಡ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
Karnataka Assembly Elections 2023: ಬಿಸಿಲುನಾಡು ರಾಯಚೂರಿನಲ್ಲಿ ಅದೊಂದು ಪಾಲಿಟಿಕಲ್ ಫೈಟ್ ನಡೆದು ಹೋಗಿದೆ. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ದೊಡ್ಡ ಹೊಡೆದಾಟವೇ ನಡೆದು ಹೋಗಿದೆ.. ಆ ಸಿನೆಮಾ ಸ್ಟೈಲ್ ಹೊಡೆದಾಟಕ್ಕೆ ರಾಯಚೂರು ಜನ ಬೆಚ್ಚಿ ಬಿದ್ದಿದ್ದಾರೆ.
Karnataka Assembly Election 2023: ಕುಮಟಾ ಕ್ಷೇತ್ರದಲ್ಲಿ ಇದುವರೆಗೂ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡದೆ ಇರುವ ಕಾರಣಕ್ಕೆ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರ ನೂರಾರು ಅಭಿಮಾನಿಗಳು ಇಂದು ಸಭೆ ನಡೆಸಿದರು. ಪಕ್ಷದ ಹೈಕಮಾಂಡ್ ಪಕ್ಷದಲ್ಲಿ ಕುಮಟಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಶಾರದಾ ಮೋಹನ ಶೆಟ್ಟಿ ಅವರ ಹೆಸರನ್ನ ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದವರು ಆಗ್ರಹಿಸಿದರು.
Sumalatha Met Modi: ಸಂಸದೆ ಸುಮಲತಾ ಅಂಬರೀಶ್ ಕೆಲ ದಿನಗಳ ಹಿಂದೆ ಅಷ್ಟೇ ಸುದ್ದಿಗೋಷ್ಠಿ ನಡೆಸಿ ತಮ್ಮ ಬೆಂಬಲವನ್ನು ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಎಂದು ಹೇಳಿ ಅವರ ನಾಯಕತ್ವ ಕುರಿತು ಕೊಂಡಾಡಿದ್ದರು. ಬೆಂಬಲ ಸೂಚಿಸಿದ ಬೆನ್ನಲೇ ಇದೀಗ ತಮ್ಮ ಪುತ್ರ ಅಭಿಷೇಕ್ ಅಂಬರೀಷ್ ಜೊತೆ ಪ್ರಧಾನಿ ನರೇಂದ್ರ ಮೋದಿಯನ್ನು ಇಂದು ಭೇಟಿ ಮಾಡಿದ್ದಾರೆ.
Kichcha Sudeep Press Meet: ಕಿಚ್ಚ ಸುದೀಪ್ ಪಕ್ಷ ಸೇರ್ಪಡೆ ಕುರಿತು ಆಯೋಜಿಸಿದ ಸುದ್ದಿಗೋಷ್ಠಿಗೂ ಮೊದಲೇ ಸುದೀಪ್ ಮಾಧ್ಯಮದವರ ಒಂದಿಷ್ಟು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದರು. ಕೆಲವು ದಿನಗಳಿಂದ ಅವರ ಸ್ನೇಹಿತ ಮ್ಯಾನೇಜರ್ ಜಾಕ್ ಮಂಜು ಪರವಾಗಿ ಟಿಕೆಟ್ ಕೇಳಿದ್ದಾರೆ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
Karnataka Assembly Elections 2023: ಏಪ್ರಿಲ್ 1ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
Karnataka Assembly Election: ಚುನಾವಣಾ ಕರ್ತವ್ಯದಲ್ಲಿರುವ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಚುನಾವಣಾ ತರಬೇತಿ ನೀಡಲಾಗಿದೆ. ಈಗಾಗಲೇ ಚುನಾವಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಕೆಲವು ಕಡೆ ಜಾಗದ ಕೊರತೆ ಇತ್ತು, ಇದನ್ನು ನಿವಾರಿಸಲಾಗಿದೆ. ಆರ್.ಓ, ಎ. ಆರ್. ಓ ಗಳು ಆಯಾ ವಿಧಾನಸಭಾ ಕ್ಷೇತ್ರದ ಎಲ್ಲ ಕೆಲಸಗಳಿಗೆ ಜವಬ್ದಾರರಾಗುತ್ತಾರೆ. ಜಿಲ್ಲಾಮಟ್ಟದಲ್ಲಿ ಮೇಲ್ಮಟ್ಟದ ಸಮಿತಿ ಇರಲಿದೆ ಎಂದು ಅವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.