Karnataka Assembly Election: ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಇದ್ದಾಗ ಏನೂ ಮಾಡಿಲ್ಲ, ಇವಾಗ ಓಲೈಕೆ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮುದಾಯದ ಜೊತೆಗೆ ನಾವು ಇದ್ದೇವೆ. ಈ ಸಮಾಜವನ್ನು ಹಿಂದೆ ಒಡೆಯುವ ಪ್ರಯತ್ನ ಕಾಂಗ್ರೆಸ್ ಮಾಡಿತ್ತು.
Karnataka Assembly Election: ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚುವಂತೆ ಮಾಡುವ ಉದ್ದೇಶದಿಂದ ಮಹಿಳಾ ಮತದಾರರಲ್ಲಿ ಅರಿವು ಮೂಡಿಸಲು ಪುರಭವನ (ಟೌನ್ಹಾಲ್)ದಲ್ಲಿ ಹಮ್ಮಿಕೊಂಡಿದ್ದ ಪಿಂಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಗರದಲ್ಲಿ ಎಲ್ಲಾ ಮಹಿಳೆಯರು ಮತಗಟ್ಟೆಗಳಿಗೆ ಬಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಹೇಳಿದರು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚಂದ. ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ ಎಂದು ರಾಣೇಬೆನ್ನೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು.
ಮೇ 6ಕ್ಕೆ ಮತ್ತೆ ರಾಜ್ಯಕ್ಕೆ ಯೋಗಿ ಎಂಟ್ರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮನ. ಬಂಟ್ವಾಳದಲ್ಲಿ ಆದಿತ್ಯನಾಥ್ ಬೃಹತ್ ರೋಡ್ ಶೋ. ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಭಾರೀ ರಣತಂತ್ರ.
Karnataka Assembly Election: ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡಿ, ಚುನಾವಣಾ ಗಲಭೆಗಳನ್ನು ಗುರುತಿಸಿ, ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೂಡ ಚುನಾವಣಾ ಅಕ್ರಮವೇಸಗುವವರು,ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ಮೇಲೆ ಸಮರ ಸಾರಿದೆ.
ಸಂಜೆ ಕಲಬುರಗಿಯಲ್ಲಿ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರಚಾರಕ್ಕೆ ಮಂಗಳವಾರ ಬೆಳಗ್ಗೆ ಬರಲಿದ್ದು 11.30ಕ್ಕೆ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಮಧ್ಯ ಕರ್ನಾಟಕದ ಲಿಂಗಾಯತ, ವಾಲ್ಮೀಕಿ ಮತದಾರರ ಶಿಕಾರಿ ನಡೆಯಲಿದ್ದು ಸುಮಾರು ಎರಡೂವರೆ ಲಕ್ಷ ಮಂದಿ ಭಾಗವಹಿಸೋ ನಿರೀಕ್ಷೆಯಿದೆ. ಮಧ್ಯಾಹ್ನ ರಾಯಚೂರಿನ ಸಿಂಧನೂರಲ್ಲಿ ಮತಬೇಟೆ ನಡೆಸಲಿರೋ ಪ್ರಧಾನಿಗಳು ಸಂಜೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಬಿಜೆಪಿ ಪಕ್ಷದ ಪರವಾಗಿ ಇತರೆ ಪಕ್ಷಗಳು ಸಾಥ್ ನೀಡಲು ಮುಂದಾಗಿವೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನ ಗುರ್ತಿಸಿರುವ ಸಲುವಾಗಿ ರಾಷ್ಟ್ರೀಯ ಲೋಕಜನಶಕ್ತಿ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಬೆಂಬಲಕ್ಕೆ ನಿಂತಿದೆ.
Dk Shivakumar: ಶಿವಕುಮಾರ್ ಅವರು ಮುಳಬಾಗಿಲಿನಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಮಂಗಳವಾರ ಮಧ್ಯಾಹ್ನ 12.10 ಸುಮಾರಿಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ್ದು, ಹೊಸಕೋಟೆ ಸಮೀಪ ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ಗಾಜು ಒಡೆದಿದೆ.
DK-Shivakumar: ಚುನಾವಣೆ ಪ್ರಚಾರಕ್ಕೆಂದು ಡಿ.ಕೆ ಶಿವಕುಮಾರ್ ಜಕ್ಕೂರು ಹೆಲಿಪ್ಯಾಡ್ ನಿಂದ ಕೋಲಾರದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ . ತುರ್ತು ಭೂಸ್ಪರ್ಶ..ಅಪಾಯದಿಂದ ಪಾರಾಗಿದ್ದಾರೆ.
Karnataka Assembly Election: ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
Karnataka Assemly Election: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ.. ಅಭ್ಯರ್ಥಿಗಳು ತಮ್ಮ ತಮ್ಮ ಪರ ರ್ಯಾಲಿಗೆ ಸಭೆ ಸಮಾರಂಭದ ಶಕ್ತಿ ಪ್ರದರ್ಶನಕ್ಕೆ ಕೂಲಿ ಕೆಲಸಗಾರರ ಮೊರೆ ಹೋಗಿದ್ದು ಕೂಲಿ ಕಾರ್ಮಿಕರಿಗೆ ಬಂಪರ್ ಆಫರ್ ಸಿಕ್ಕಿದೆ. ಚುನಾವಣೆಯ ಅಭ್ಯರ್ಥಿಗಳ ಪರ ಬೆಳಿಗ್ಗೆ ಪ್ರಚಾರಕ್ಕೆ ಬಂದು ಜೈ ಅಂದ್ರೆ 500 ರೂ.,,, ರ್ಯಾಲಿಗೆ ಬಂದ್ರೆ 1000 ರೂ., ಒಂದು ದಿನ ಪ್ರಚಾರದಲ್ಲಿ ಭಾಗಿಯಾದ್ರೆ 2000 ರೂ, ಅದರಲ್ಲೂ ಸ್ವಲ್ಪ ಅಂದಚಂದ ಇರೋ ಹೆಣ್ಣು ಮಕ್ಕಳು ಬಂದು ಪೋಸ್ ಕೊಟ್ರೆ ದಿನಕ್ಕೆ 2 ರಿಂದ ಎರಡೂವರೆ ಸಾವಿರ ರೂಪಾಯಿಗಳ ಜೊತೆಗೆ ಊಟ, ಎಣ್ಣೆ... ಹೀಗೆ ಭರ್ಜರಿ ಆಫರ್ ನೀಡಲಾಗುತ್ತಿದೆ.
Karnataka assembly elections: ಐತಿಹಾಸಿಕ ನಗರ ಮೈಸೂರಿಗೆ ಟೂರಿಸಂ ಸರ್ಕೀಟ್ ಮಾಡಿ ಮೈಸೂರನ್ನು ಅಂತರಾಷ್ಟ್ರೀಯ ಭೂಪಟದಲ್ಲಿ ತೆಗೆದುಕೊಂಡು ಹೋಗಲು ಬಿಜೆಪಿ ಸರ್ಕಾರ ಬದ್ಧವಾಗಿದೆ. ಇದು ಈಡೇರಬೇಕಾದ್ರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Priyanka Gandhi: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ.ಮೈಸೂರು-ಚಾಮರಾಜನಗರದಲ್ಲಿ ಮತಯಾಚನೆ ಮುಗಿಸಿದ್ದು, ಇದೀಗ ನಾಳೆ ಕೆಲವು ದೊಡ್ಡ ನಗರಗಳಲ್ಲಿ ಪ್ರಚಾರದಲ್ಲಿ ಭಾಗಿಯಲಿದ್ದಾರೆ.
Karnataka Assembly Elections: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇ ಬೇಕು ಎಂದು ಪಣತೊಟ್ಟಿರುವ ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದೆ. ಹೈ ಕಮಾಂಡ್ ತಮ್ಮ ಮೇಲಿಟ್ಟಿರುವ ಭರವಸೆಯನ್ನು ಶತಾಯಗತಾಯ ಉಳಿಸಿಕೊಳ್ಳಲೇ ಬೇಕು ಎಂದು ಹೋರಾಡುತ್ತಿರುವ ಸಚಿವ ವಿ. ಸೋಮಣ್ಣ, ಬಿರು ಬಿಸಿಲನಲ್ಲಿ ಸತತವಾಗಿ ಪ್ರಚಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ತಲೆ ಸುತ್ತಿ ಕಾರಿನಲ್ಲೇ 20 ನಿಮಿಷ ಕುಳಿತು ಸುಧಾರಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.