Karnataka Budget 2024: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಫ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Karnataka state budget 2024 Updates: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ (Pre-Commissioning Test) ನೀರು ಹರಿಸಿ ಚಾಲನೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.
ಒಂದು ಕೈಯ್ಯಲ್ಲಿ ಗ್ಯಾರಂಟಿಗಳನ್ನು ಕೊಟ್ಟು ಜನರನ್ನು ಬಡತನದಿಂದ ಮಧ್ಯಮ ವರ್ಗಕ್ಕೆ ತಂದಿದ್ದೇವೆ ಎನ್ನುವ ರಾಜ್ಯ ಸರಕಾರ, ಹಾಗೆ ಕೊಟ್ಟು ಹತ್ತು ಕೈಗಳಲ್ಲಿ ಹೀಗೆ ಆ ಹಣವನ್ನು ಕಿತ್ತುಕೊಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.ಇದು ರಾಜ್ಯವನ್ನು ವಿನಾಶದ ಅಂಚಿಗೆ ತಳ್ಳುತ್ತಿರುವ ʼಸಿದ್ದನಾಮಿಕ್ಸ್ʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ ಕುಮಾರಸ್ವಾಮಿ ಅವರು.
ಸಿಎಂ ಸಿದ್ದರಾಮಯ್ಯ ನಾಳೆ ದಾಖಲೆಯ 14 ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಆ ಮೂಲಕ 13 ಬಾರಿ ಬಜೆಟ್ ಮಂಡನೆಯ ದಾಖಲೆಯನ್ನು ಹೊಂದಿದ್ದ ರಾಮಕೃಷ್ಣ ಹೆಗಡೆಯವರ ದಾಖಲೆಯನ್ನು ಮುರಿಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.