ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉತ್ತರ ಪ್ರದೇಶದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾಗಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ರಾಜ್ಯದಲ್ಲಿ ಯಾರಿಗೂ ಬಹುಮತ ಬಂದಿಲ್ಲ. ಬಿಜೆಪಿಗೂ ಕೂಡ. ಹಾಗಾಗಿಯೇ ಜಾತ್ಯತೀತ ತತ್ವದಡಿ ಜೆಡಿಎಸ್-ಕಾಂಗ್ರೆಸ್ ಒಂದಾಗಿವೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಅಪವಿತ್ರ ಎಂಬುದು ಅಮಿತ್ ಷಾ ಅವರ ವಾದ. ಹಾಗಾದರೆ ಪವಿತ್ರವಾದದ್ದು ಯಾವುದು @ಅಮಿತ್ ಶಾ?- ಎಚ್ ಡಿಕೆ ಪ್ರಶ್ನೆ
'ರಾಜ್ಯದಲ್ಲಿ ರಚನೆ ಆಗಲಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ’ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮೈತ್ರಿ ಸರ್ಕಾರ ಹೈಕಮಾಂಡ್ ನಿರ್ಧಾರ. ರಾಜ್ಯದಲ್ಲಿ ಜಾತ್ಯಾತೀತ ಸರ್ಕಾರವಿರಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನಿರ್ಧಾರ ಕೈಗೊಂಡಿದ್ದರು. ಇಡೀ ದೇಶ ಕೂಡ ಇದನ್ನೇ ಬಯಸಿದೆ- ಡಿಕೆಶಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.