ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Karnataka News Updates: ಎಂತಹದೇ ಕಷ್ಟಕರ ಪರಿಸ್ಥಿತಿ ಬಂದರೂ ರೈತಬಾಂಧವರು ತಮ್ಮ ಗೋವುಗಳನ್ನು ಕಟುಕರಿಗೆ ಮಾರ ಬೇಡಿ. ಅಂಥ ಬೇಡವಾದ ಗೋವುಗಳಿಗೆ ಆಶ್ರಯ ನೀಡಲು ಅನೇಕ ಗೋಶಾಲೆಗಳು ನಮ್ಮಲ್ಲಿದೆ. ರೈತ ತನಗೆ ಭಗವಂತ ನೀಡಿದ ಅಸಾಧಾರಣ ಬುದ್ದಿಶಕ್ತಿ ಮತ್ತು ಯುಕ್ತಿಯಿಂದ ಯಾವ ತಂತ್ರಜ್ಞಾನದಿಂದಲೂ ಉತ್ಪತ್ತಿಸಲಾಗದ ಚಿನ್ನಕ್ಕಿಂತಲೂ ಮಿಗಿಲಾದ ಅನ್ನವನ್ನು ಜಗತ್ತಿಗೆ ನೀಡುತ್ತಿದ್ದಾನೆ.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸರ್ಕಾರದ ಆದೇಶದಂತೆ ರೈತರಿಗೆ ಪ್ರತಿ ಎಕರೆಗೆ 6 ಕ್ವಿಂಟಾಲ್ ಮತ್ತು ಗರಿಷ್ಠ 20 ಕ್ವಿಂಟಾಲ್ ಕೊಬ್ಬರಿ ಖರೀದಿಗೆ ಅವಕಾಶವಿದೆ. ಖರೀದಿಗೆ 3 ತಿಂಗಳ ಅವಕಾಶ ನೀಡಲಾಗಿದ್ದು, ಅಗತ್ಯವಿದ್ದರೆ ಖರೀದಿ ಅವಧಿ ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.
Crime News in Kalaburagi: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಧಾನಸಭೆಯ ಪಡಸಾಲೆಯಲ್ಲಿ ವಿಪಕ್ಷ ನಾಯಕರ ಜೊತೆ ಬಹಳ ಆತ್ಮೀಯವಾಗಿ ಮಾತುಕತೆ ಮೂಲಕ ಪಾಸಿಟಿವ್ ಆಗಿರುವ ಬಗ್ಗೆ ಕೇಳಿದಾಗ, ‘ಚುನಾವಣೆ ಮುಗಿದಿದೆ. ನೆಗೆಟಿವ್ನಿಂದ ಯಾವ ಪ್ರಯೋಜನವಿದೆ? ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದು, ನಾವು ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಡಿಕೆಶಿ ಹೇಳಿದರು.
ಕಳೆದ 2 ವರ್ಷಗಳಿಂದ ಬಾಲಕಿ ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳಂತೆ. ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳಂತೆ.
ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು,ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ.ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರು ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ನೂತನ ಪಕ್ಷಕ್ಕೆ ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಎಂದು ಹೆಸರಿಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜನಾರ್ಧನ ರೆಡ್ಡಿ ಪಕ್ಷ ಟಕ್ಕರ್ ನೀಡಲಿದೆ. ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ, ಯಾದಗಿರಿ ಬಿಜಾಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಈ ಪಕ್ಷ ಪ್ರಾಬಲ್ಯ ಸಾಧಿಸುವ ಸಾಧ್ಯತೆ ಇದೆ. ಹೊಸ ಪಕ್ಷ ಉದಯವಾದ ಹಿನ್ನೆಲೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ಮತಗಳಿಗೆ ಹೊಡೆತ ಬಿಳುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.