ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಳಂಬ ಹಿನ್ನೆಲೆ ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿರುವ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಈಗ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದೆ.
ಇಂದು ಕ್ರಿಸ್ ಮಸ್ ಹಬ್ಬವಾಗಿದ್ದು, ನಾನು ಕಂಡಂತೆ ಎಲ್ಲಾ ಜಾತಿ, ಧರ್ಮದವರು ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷನಾಗಿ ಆರ್ಚ್ ಬಿಷಪ್ ಅವರನ್ನು ಭೇಟಿ ಮಾಡಿ ಸಮುದಾಯಕ್ಕೆ ಶುಭ ಕೋರಿ, ಅವರ ಆಶೀರ್ವಾದ ಪಡೆದಿದ್ದೇನೆ.
ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ನಿರ್ಗಮನ ವದಂತಿಗಳ ಒತ್ತಡದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಬಿಜೆಪಿಯಲ್ಲಿ ತಮ್ಮ ಸಹೋದ್ಯೋಗಿಗಳಿಗೆ ಯಾವುದೇ ಅಶಿಸ್ತು ತೋರದಂತೆ ಮನವಿ ಮಾಡಿದ್ದಾರೆ.
ಭಾನುವಾರದಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ 14 ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಕ್ರಮವನ್ನು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ. ಸ್ಪೀಕರ್ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು ಎಂದು ಹೇಳಿದ್ದಾರೆ.
ಸೋಮವಾರದಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ಈಗ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿಯನ್ನು ಕರೆದು 14 ಶಾಸಕರನ್ನು ಅನರ್ಹಗೊಳಿಸಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ.
ನೀರಿಲ್ಲದೆ ಪರದಾಡುತ್ತಿದ್ದ ತುಮಕೂರು ಜನರ ಆಕ್ರಂದನದ ಫಲವೇ ಇಂದಿನ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಸಂಸದ ಜಿ.ಎಸ್. ಬಸವರಾಜು ದೇವೇಗೌಡರ ಕುಟುಂಬದ ವಿರುದ್ದ ವಾಗ್ಧಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.