ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ, ಕಳೆದ ನಾಲ್ಕು ದಿನಗಳಲ್ಲಿ ಹತರಾದ ಒಟ್ಟು ಭಯೋತ್ಪಾದಕರ ಸಂಖ್ಯೆ 8 ಕ್ಕೆ ತಲುಪಿದೆ.ಇತ್ತೀಚಿನ ಎನ್ಕೌಂಟರ್ ಪುಲ್ವಾಮಾ ಜಿಲ್ಲೆಯ ಪಹೂ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
J&K Encounter: ಇತ್ತೀಚೆಗೆ ಹಾಸನ್ಪೋರಾ ಅನಂತನಾಗ್ನಲ್ಲಿ ಹೆಚ್ಸಿ ಅಲಿ ಮೊಹದ್ ಹತ್ಯೆಯಲ್ಲಿ ಭಾಗಿಯಾಗಿದ್ದ ಇಖ್ಲಾಕ್ ಹಜಾಮ್ ಇಂದು ಎನ್ಕೌಂಟರ್ನಲ್ಲಿ ಹತರಾದ ಭಯೋತ್ಪಾದಕರಲ್ಲಿ ಒಬ್ಬರು ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ಗುರುವಾರ (ಜೂನ್ 25) ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳಿಂದ ಸಾವನ್ನಪ್ಪಿದ್ದಾರೆ.
ಶೋಪಿಯಾನ್ನ ಪಿಂಜೋರಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ. ಹೆಚ್ಚಿನ ವಿವರಗಳಿಗಾಗಿ ಎದುರುನೋಡಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಪೊಲೀಸ್ ಅಧಿಕಾರಿ ಪ್ರಕಾರ, ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಸೇನೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.