Bengaluru's 2nd airport: 2ನೇ ವಿಮಾನ ನಿಲ್ದಾಣ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದ ಪ್ರಕಾರ, 2033ರವರೆಗ 150KM ಅಂತರದಲ್ಲಿ ಮತ್ತೊಂದು ವಿಮಾನ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಇನ್ನು 8 ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳಿಗೆ ನೆಲ, ಜಲ, ವಿದ್ಯುತ್ ಇತ್ಯಾದಿ ಸೌಲಭ್ಯಗಳನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಸ್ಥಳೀಯ ಭಾಷೆಯ ಬೆಳವಣಿಗೆ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು.
ಪ್ರಧಾನಿ ಮೋದಿಯವರು ಇಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಇನ್ನು ಈ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದೇ 11ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ PM ನರೇಂದ್ರ ಮೋದಿಯವರಿಗೆ ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವೊಂದನ್ನ ರೆಡಿ ಮಾಡಲಾಗಿದೆ.
ಇವು ಆಸ್ಟ್ರೇಲಿಯಾ ಮತ್ತು ದಕ್ಷಿಣ ಭಾರತದ ನಡುವೆ ವಿಮಾನ ನಿಲ್ದಾಣ ಹಾರಾಟ ನಡೆಸುತ್ತಿರುವ ಮೊದಲ ನೇರ ವಿಮಾನಗಳಾಗಿದ್ದು ಸುಮಾರು ಮೂರು ಗಂಟೆಗಳಷ್ಟು ಕಡಿತಗೊಳಿಸಿ ಬೆಂಗಳೂರು ಮತ್ತು ಸಿಡ್ನಿ ನಡುವೆ ಅತ್ಯಂತ ವೇಗದ ಸಂಚಾರ ನೀಡುತ್ತಿದೆ.
ಅಂತಾರಾಷ್ಟ್ರೀಯ ವಿಮಾನಗಳು ಭಾರತಕ್ಕೆ ಹಾಗೂ ಭಾರತದಿಂದ ವಿದೇಶಗಳಿಗೆ ಮತ್ತೆ ಪ್ರಯಾಣ ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರತಿ ದಿನ 25 ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ನಡೆಸಲಾಗುತ್ತಿದೆ.ಈ ಹಿಂದೆ ದಿನಕ್ಕೆ 10 ಮಾತ್ರವಿದ್ದು ನಿರ್ಗಮನ ಪ್ರಯಾಣಗಳು, ಇದೀಗ 25ಕ್ಕೆ ಹೆಚ್ಚಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Kempegowda International Airport) ತನ್ನ ಗ್ರಾಹಕ-ಕೇಂದ್ರಿತ ವಿಧಾನಕ್ಕೆ ಪ್ರಶಂಸೆಗೆ ಒಳಗಾಗಿದ್ದು, ಸ್ಮಾರ್ಟ್ ಆವಿಷ್ಕಾರ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಗೆ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2022ರಲ್ಲಿ ಎರಡು ಪ್ರಮುಖ ಪುರಸ್ಕಾರಗಳನ್ನು ತನ್ನದಾಗಿಸಿಕೊಂಡಿದೆ.
Smuggling foreign currency: 24 ಲಕ್ಷ ವಿದೇಶಿ ಕರೆನ್ಸಿ ಹಣವನ್ನ ಕಳ್ಳ ಸಾಗಾಟ ಮಾಡಲು ಯತ್ನಿಸಿದ ಪ್ರಯಾಣಿಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ಐ (ಕಂದಾಯ ಗುಪ್ತಚರ ನಿರ್ದೇಶನಾಲಯ) ಅಧಿಕಾರಿಗಳು ಬಂಧಿಸಿದ್ದಾರೆ.
Bengaluru City to Kempegowda International Airport: ನೈ ರುತ್ಯ ರೈಲ್ವೆ ಸೋಮವಾರದಿಂದ ಮುಖ್ಯ ರೈಲ್ವೆ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ದೇವನಹಳ್ಳಿ ನಡುವೆ ರೈಲು ಸಂಚಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.