ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಆಹ್ವಾನ ಗೊಂದಲ ಮುಗಿಯುವಂತೆ ಕಾಣುತ್ತಿಲ್ಲ. ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವ ಕೃಪದ ಕಾರ್ಯಕ್ರಮ ಅಲ್ಲ. ಇದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಲಿ ಎಂದು ಒತ್ತಾಯಿಸಿದೆ. ಅಲ್ಲದೆ,
ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಯನ್ನು ಸುಳ್ ಸಿಎಂ ಎಂದು ಜೆಡಿಎಸ್ ಕುಟುಕಿದೆ.
Kempegowda statue inauguration program : ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸ್ವತಃ ಮುಖ್ಯಮಂತ್ರಿಗಳೇ ಕರೆ ಮಾಡಿ ಮತ್ತು ಪತ್ರ ಬರೆದು ಆಹ್ವಾನಿಸಿದ್ದರು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದ್ರೆ ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ ಎಂದು ಜೆಡಿಎಸ್ ಟೀಕಿಸಿದೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲವೆಂದು ಜೆಡಿಎಸ್ ಅಸಮಾಧಾನ ಹೊರ ಹಾಕಿದ್ದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಬಿಜೆಪಿ, ‘ಮೊದಲ ಆಹ್ವಾನ ಪತ್ರಿಕೆಯನ್ನೇ ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ’ ಅಂತಾ ಹೇಳಿದೆ.
ನಾಡಪ್ರಭು ಕೆಂಪೇಗೌಡರ ನೂರಾ ಎಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ಬಿಜೆಪಿ ಸರಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದ್ದಾರೆ ಎಂದು ಕಿಡಿಕಾರಿದೆ.
ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್ ಪಾರ್ಕ್ನಲ್ಲಿ ಬಳಸಿಕೊಳ್ಳಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.