ಹೆಚ್ಚಿದೆ ಟಿಕೆಟ್ ಅಕಾಂಕ್ಷಿಗಳ ಪ್ರಯತ್ನ. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ಮಾಡ್ತಿದ್ದಾರೆ. ಮತದಾರರನ್ನು ಸೆಳೆಯಲು, ಹೈ ಕಮಾಂಡ್ಗೆ ಹತ್ತಿರವಾಗಲು ಹೊಸ ಮುಖಗಳು ತಮ್ಮದೇ ಆದ ರಣತಂತ್ರ ರೂಪಿಸುತ್ತಿದ್ದಾರೆ.
ಕೋಲಾರ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಮಂಟಪದಲ್ಲಿ ಸಿಂಹಾಚಲಂ ವರಹಾ ಲಕ್ಷ್ಮೀನರಸಿಂಹಸ್ವಾಮಿಯ ಕಲ್ಯಾಣೋತ್ಸವ ಬಹಳ ವಿಜೃಂಭಣೆಯಿಂದ ನಡೆದಿದೆ. ಸಾವಿರಾರು ಭಕ್ತರು ಸ್ವಾಮಿಯ ಕಲ್ಯಾಣೋತ್ಸವಕ್ಕೆ ಸಾಕ್ಷಿಯಾಗಿದ್ದರು.
ಕೋಲಾರ ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶಾಸಕ ಶ್ರೀನಿವಾಸಗೌಡ ನಿವಾಸದ ಮುಂಭಾಗ ಜೆಡಿಎಸ್ ಎಂಎಲ್ ಸಿ ಗೋವಿಂದರಾಜು ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ಚೆಹ್ನೆ ಮೂಲಕ ಗೆದ್ದಿರುವ ಶ್ರೀನಿವಾಸಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕುವ ಮೂಲಕ ಅಡ್ಡಮತದಾನ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಭೈರತ್ನಹಳ್ಳಿ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಬೈರತ್ನಹಳ್ಳಿ ಗ್ರಾಮಸ್ಥರ ನೇತೃತ್ವದಲ್ಲಿ ಏರ್ಪಡಿಸಿದ್ದಾರೆ. ಇನ್ನೂ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಗಳಿಗೆ ಮಕ್ಕಳ ತಜ್ಞ ಡಾ.ಕಿರಣ್ ಸೋಮಣ್ಣ ಅವರು ಚಾಲನೆ ನೀಡಿದರು.
Kolar Gold Fields - ಕೋಲಾರ ಜಿಲ್ಲೆಯ ರಾಬರ್ಟ್ಸನ್ಪೇಟೆ ತಾಲೂಕಿನಲ್ಲಿರುವ ಈ ಚಿನ್ನದ ಗಣಿ ವಿಶ್ವದಲ್ಲೇ ಅತ್ಯಂತ ಪ್ರಸಿದ್ಧ ಚಿನ್ನದ ಗಣಿಯಾಗಿದೆ. ಜಿಲ್ಲಾ ಕೇಂದ್ರದಿಂದ ಇದು ಸುಮಾರು 30 ಕಿ.ಮೀ. ದೂರದಲ್ಲಿದ್ದು, ಇದನ್ನು 17-18 ನೇ ಶತಮಾನದ ನಡುವೆ ಪ್ರಾರಂಭಿಸಲಾಗಿತ್ತು. ಆ ನಂತರ 121 ವರ್ಷಗಳಲ್ಲಿ ಇಲ್ಲಿಂದ 900 ಟನ್ ಚಿನ್ನವನ್ನು ಹೊರತೆಗೆಯಲಾಗಿದೆ.
ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.