ಉರಿಗೌಡ-ನಂಜೇಗೌಡ ಸೃಷ್ಟಿಯಿಂದ ಒಕ್ಕಲಿಗ ಸಮುದಾಯಕ್ಕೆ ಅಪಮಾನ. ಯಾರನ್ನೋ ಕರೆದು ಮಾತಾಡುವುದಲ್ಲ, ಸ್ವಾಮೀಜಿಗಳು ಹೋರಾಟ ಮಾಡಬೇಕು. ಬಿಜೆಪಿಯ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸಕ್ಕೆ ಕಡಿವಾಣ ಹಾಕಬೇಕು ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ರು.
ಇತ್ತೀಚಿಗೆ ಕೆಪಿಸಿಸಿ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅರ್ಜಿ ಅವಕಾಶ ಮುಕ್ತಗೊಳಿಸಿತ್ತು. ಈ ಕಾರಣ ಹಾಲಿ ಹಾಗೂ ಮಾಜಿ ಶಾಸಕರು, ಆಕಾಂಕ್ಷಿಗಳ ವಿರುದ್ಧ ಕ್ಷೇತ್ರದಲ್ಲಿ ಪೈಪೋಟಿ ನಡೆಸುವಂತಾಗಿದೆ. ಇದಲ್ಲದೆ ಕೆಪಿಸಿಸಿ ಪ್ರತಿ ಕ್ಷೇತ್ರದಿಂದ 1 ರಿಂದ 3 ಅಭ್ಯರ್ಥಿಗಳ ಲಿಸ್ಟ್ ಕಳುಹಿಸಲು ಸೂಚಿಸಲಾಗಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನವರಿ 11 ರಿಂದ ಬಸ್ ಯಾತ್ರೆ ಆರಂಭಗೊಳ್ಳಲಿದೆ. ಬೆಳಗಾವಿ ಸೇರಿ ಒಟ್ಟು 21 ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಸಂಚಾರ ಮಾಡಲಿದೆ. ಜಂಟಿ ಬಸ್ ಯಾತ್ರೆಯಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ.
ʻಕೈʼ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ವಿಚಾರ. ತಡ ಯಾಕೆ, ತಕ್ಷಣವೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಿ. ಇವರು ಆಪರೇಷನ್ ಲೋಟಸ್ ಎಕ್ಸ್ಪರ್ಟ್ ಎಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ. ರಾಜ್ಯ, ದೇಶಕ್ಕೆ ಈ ಸರ್ಕಾರ ಕೆಟ್ಟ ಹೆಸರು ತಂದಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಪಕ್ಷದ ಎಷ್ಟೋ ಲೀಡರ್ ಗುಂಡಿಗೆ ಬಲಿಯಾಗಿದ್ದಾರೆ. ನಾವು ನಿಮ್ಮ ಕೇಸ್ಗೆ ಹೆದರುತ್ತೀವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಇದೇ ವೇಳೆ ಸಂಸದ ತೇಜಸ್ವಿಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರ ಹುಟ್ಟುಹಬ್ಬ ಕಾರ್ಯಕ್ರಮ ನಂತರ ಕಾಂಗ್ರೆಸ್ ಹೋಳಾಗಲಿದೆ ಎಂಬ ಪ್ರಶ್ನೆಗೆ, 'ಕಾಂಗ್ರೆಸ್ ಪಕ್ಷ ಒಡೆದು ಹೋಳಾಗಲು ಕುಂಬಳಕಾಯಿಯು ಅಲ್ಲ, ಮಡಿಕೆಯೂ ಅಲ್ಲ' ಎಂದು ತಿರುಗೇಟು ಕೊಟ್ಟರು. ಪಿಎಸ್ಐ ಹಗರಣದಲ್ಲಿ ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಮಂಪರು ಪರೀಕ್ಷೆ ಮಾಡಬೇಕು ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ʼತನಿಖಾಧಿಕಾರಿಗಳು ಕೇವಲ 50 ಜನರನ್ನು ಮಾತ್ರ ಬಂಧಿಸಿದ್ದಾರೆ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದು, ಅದನ್ನು ಮಾಡಲಿಲ್ಲ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಸಮನ್ಸ್ ನೀಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿಶೇಷ ಕೋರ್ಟ್ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಇತ್ತೀಚೆಗಷ್ಟೇ ಚಾರ್ಜ್ಶೀಟ್ ಸಲ್ಲಿಸಿದ್ರು. ಅದರಂತೆ ಡಿ.ಕೆ.ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿತ್ತು. ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗಲಿದೆ.
ಒಂದು ಕೋಟಿಗೆ ಯಾವ್ ಅಪಾಯಿಂಟ್ ಮೆಂಟು, 50 ಲಕ್ಷಕ್ಕೆ ಯಾವ ಅಪಾಯಿಂಟ್ ಮೆಂಟು ಅಂತಾ ಒಂದು ಪತ್ರಿಕೆಯವರು ಲಿಸ್ಟ್ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜೆ.ಪಿ. ನಡ್ಡಾ ಹಾಗೂ ಇತರೆ ನಾಯಕರ ಜತೆ ಈ ವಿಚಾರದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಇದು ಈ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗಬೇಕಾದ ವಿಷಯ. ಬಿಜೆಪಿ ಆಡಳಿತದಲ್ಲಿ ಸಬ್ ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ ವಿವಿಧ ಇಲಾಖೆ ಹುದ್ದೆಗಳ ನೇಮಕಾತಿಗೆ ಇಂತಿಷ್ಟು ಎಂದು ಹಣ ನಿಗದಿಯಾಗಿದೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ 40% ಭ್ರಷ್ಟಾಚಾರ ಆರೋಪದ ಬಗ್ಗೆ ನಿಲುವಳಿ ಸೂಚನೆ ಕೊಟ್ಟರೆ ಸ್ಪೀಕರ್ ಅದನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಚರ್ಚೆ ಇಲ್ಲದೆ ತಿರಸ್ಕಾರ ಮಾಡಿದ್ದರು. ಬಹುಷಃ ಅಂದು ಚರ್ಚೆಗೆ ಅವಕಾಶ ಕೊಟ್ಟರೆ ಇಂತಹ ಘಟನೆ ಆಗಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
Congress Padayatre: ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಮಕ್ಕಳು ಅಲ್ಲ. ನಮ್ಮನ್ನು ಜೈಲಿಗೆ ಹಾಕಿದ್ರು ಪರವಾಗಿಲ್ಲ. ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.