Gruha Lakshmi: ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ.ಎರಡು ತಿಂಗಳಿನಿಂದ ಖಾತೆ ಸೇರದೆ ಉಳಿದಿರುವರುವ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಲಿರುವ ದಿನ ಯಾವುದು ಎನ್ನುವ ಸುಳಿವನ್ನು ನೀಡಿದ್ದಾರೆ.
Gruha Lakshmi: ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಎರಡು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ.
ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ. ಈ ಕ್ಷೇತ್ರಕ್ಕೆ ಒಳ್ಳೆಯ ಕೆಲಸ ತರುವುದೇ ನನ್ನ ಉದ್ದೇಶ. ಮೊದಲ ಬಾರಿಗೆ ಈ ಕ್ಷೇತ್ರದಿಂದ ಮಂತ್ರಿಯಾದಗಿದ್ದೇನೆ. ಈ ಸೌಭಾಗ್ಯಕ್ಕಾಗಿ ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯಾದ 'ಭಾಗ್ಯಲಕ್ಷ್ಮಿ ಯೋಜನೆ'ಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಯಾವೊಬ್ಬ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
Belagavi Woman Assault Case: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್ ಸಾಹೇಬ್ರು ಮರೆತಂತಿದೆ’ ಎಂದು ಟೀಕಿಸಿದೆ.
ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ. ಪುತ್ತಿಗೆ ಮಠದಲ್ಲಿ ಬುಧವಾರ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವರನ್ನು ಪರ್ಯಾಯ ಸಮಿತಿಯ ಮಹಾಪೋಷಕರನ್ನಾಗಿ ಘೋಷಿಸಲಾಯಿತು.
Tiger nail case : ಬಿಗ್ಬಾಸ್ ಮನೆಯೊಳಗೆ ನುಗ್ಗಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಯಿತು. ಅಲ್ಲದೆ, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ವಶಕ್ಕೆ ಪಡೆಯಲಾಗಿದೆ. ಆದ್ರೆ ನನ್ನ ಬಳಿ ಇರುವುದು ನಿಜವಾದ ಹುಲಿ ಉಗುರು ಎಂದ ರಾಜ್ಯ ಸಭಾ ಸದಸ್ಯ ಜಗ್ಗೇಶ್ ವಿರುದ್ಧ ನೋಟಿಸ್ ನೀಡಲಾಗಿದೆ. ಉಳಿದ ನಟರ ವಿಚಾರಣೆ ಮಾಡಲಾಗಿದೆಯಷ್ಟೇ..
ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.
ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.
Gruha Lakshmi: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಲ್ಲಿ ಇದುವರೆಗೂ 93 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ರಾಜಕೀಯ ಬಣ್ಣ ಬೇಡ, ಮಕ್ಕಳ ಹಿತದೃಷ್ಟಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜುಲೈ 14ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ.ಜುಲೈ 3 ಅಥವಾ 4ನೇ ತಾರೀಖಿನಂದು ಈ ಬಗ್ಗೆ ಘೋಷಣೆ ಮಾಡ್ತೀವಿ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ವಿಶೇಷವಾದ ಸಾಧನೆಯನ್ನು ಮಾಡಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.