ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ರಾಜ್ಯಕ್ಕೆ ಹಾಗೂ 6 ಕೋಟಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟು ಅವಮಾನಿಸಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸ್ವಾಭಿಮಾನ ಮೆರೆಯಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ.
Lok Sabha Election 2024: ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ 983 ಮತಗಟ್ಟೆಗಳಲ್ಲಿ 197 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ.ಮೊಬೈಲ್ ನೆಟ್ ವರ್ಕ್ ಲಭ್ಯವಿಲ್ಲದ ಒಟ್ಟು 17 ಮತಗಟ್ಟೆಗಳು ಗುರುತಿಸಲಾಗಿದೆ.
Lok Sabha Election 2024:ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
lok sabha election 2024: ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.