ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಏಳು ಹಂತಗಳ ಉಮೇದುವಾರಿಕೆಯಲ್ಲಿ ಹಲವು ಏರಿಳಿತ ಕಾಣುತ್ತಿದ್ದು ಮತಬೇಟೆ ಕೂಡ ಬಿರುಸಾಗಿ ಸಾಗಿದೆ. ಈ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಮತದಾರರ ಜಾಗೃತಿ ಕೂಡ ಜೀ ಕನ್ನಡ ನ್ಯೂಸ್ ನಡೆಸುತ್ತಿದ್ದು ಜೊತೆಗೆ ಕ್ಷೇತ್ರ ಪರಿಚಯ ಕೂಡ ಆರಂಭವಾಗಿದೆ. ಸಂಸತ್ ಕ್ಷೇತ್ರದಲ್ಲಿ ಕಾಡುತ್ತಿರುವ ಸಮಸ್ಯೆಗಳು, ಹಿಂದೆ ಗೆದ್ದಿರೋ ಪಕ್ಷ ಮತ್ತು ನಾಯಕರ ಸಾಧನೆ, ಜಾತಿವಾರು ಶಕ್ತಿ ಹೇಗೆ ಪ್ರಭಾವ ಬೀರಲಿದೆ..? ನಿರ್ಣಾಯಕ ಸಾಮಾಜಿಕ ಅಂಶ ಹಾಗೂ ಕ್ಷೇತ್ರದ ಭೌಗೋಳಿಕ ಹಿನ್ನೆಲೆ ಹೇಗಿದೆ..? ಅಭ್ಯರ್ಥಿಗಳ ಗೆಲುವಿಗೆ ಮತದಾರನ ಮೇಲೆ ಪ್ರಭಾವ ಬೀರುವ ಅಂಶಗಳನ್ನು ನಿಮ್ಮ ಮುಂದಿಡುವ ಕಾರ್ಯಕ್ರಮವೇ ಕ್ಷೇತ್ರ ಪರಿಚಯ
Lok Sabha elections: ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್ʼನಲ್ಲಿ ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ರಾಹುಲ್ ಗಾಂಧಿ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲು ಒಪ್ಪುತ್ತಿಲ್ಲ. ಈ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡರೊಂದಿಗೆ ಮಾತನಾಡಿರುವ ರಾಹುಲ್ ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲು ಬಯಸುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.
ಜಾರ್ಖಂಡ್ ನ 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಮತ್ತೂ ಜಾರ್ಖಂಡ್ ವಿದ್ಯಾರ್ಥಿಗಳ ಸಂಘಟನೆ 12 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಉಳಿದಂತೆ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತಲಾ ಒಂದು ಸ್ಥಾನ ಪಡೆದಿವೆ.
ನಸೀಮ್, ವಸೀಮ್ ಮತ್ತು ಗೋಲು ವಿರುದ್ಧ ಹತ್ಯೆ ಆರೋಪಿಗಳಾಗಿದ್ದು, ಲೋಕಸಭೆ ಚುನಾವಣೆ ಮತ್ತು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಹತ್ಯೆ ಎಸಗಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.