2019 ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿ ಮಾಹಿತಿ ನೀಡಿರುವ ಗೃಹ ಸಚಿವಾಲಯದ ಅಧಿಕಾರಿಗಳು, ಭಾರತದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಹೇಳಿದರು.
ಈ ಹಿಂದೆ ಆಡಳಿತ ಪಕ್ಷ ಇವಿಎಂಗಳ ದುರುಪಯೋಗ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಅನುಮಾನ ವ್ಯಕ್ತಪಡಿಸಿದ್ದವು. ಅದೀಗ ಚುನಾವಣೋತ್ತರ ಸಮೀಕ್ಷೆಯಿಂದ ಸಾಬೀತಾಗಿದೆ ಎಂದು ಇವಿಎಂ ದುರ್ಬಳಕೆ ಬಗ್ಗೆ ಸಿಎಂ ಆರೋಪಿಸಿದ್ದಾರೆ.
ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯಕ್ ಅವರು ಸಿಎಂ ಯೋಗಿ ಆದಿತ್ಯನಾಥ್ ಮನವಿಯನ್ನು ಅಂಗೀಕರಿಸಿದ್ದು, ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ನಾಯಕ ಹಾಗೂ ಸಚಿವ ಓಂ ಪ್ರಕಾಶ್ ರಾಜ್ಬರ್ ಅವರನ್ನು ಈ ಕ್ಷಣದಿಂದಲೇ ಸಚಿವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ 2019ರ ಕೊನೆಯ ಹಂತದ ಮತದಾನ ಭಾನುವಾರ ನಡೆಯುತ್ತಿದ್ದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪ್ರಧಾನಿ ಮೋದಿ ಅವರ ಕೇದಾರನಾಥ ಭೇಟಿ ಮಾತ್ರ ಸುದ್ದಿ ವಾಹಿನಿಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿತ್ತು.
ಲೋಕಸಭಾ ಚುನಾವಣೆಯ ಕಡೆಯ ಹಂತದ ಮತದಾನ ಭಾನುವಾರ ಪೂರ್ಣಗೊಂಡ ಬೆನ್ನಲ್ಲೇ ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳೂ ಎನ್ಡಿಎ ಸರ್ಕಾರ ಸ್ಪಷ್ಟ ಬಹುಮತ ಗಳಿಸಿ ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದ್ದವು.
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇಂದು ಲಕ್ನೋದಲ್ಲಿಯೇ ಇರಲಿದ್ದು, ದೆಹಲಿಯಲ್ಲಿ ಯಾವುದೇ ಸಭೆಯಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ ಎಂದು ಬಿಎಸ್ಪಿ ನಾಯಕ ಸತೀಶ್ ಚಂದ್ರ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.
ಪಂಜಾಬ್, ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಚಂಡೀಘಡ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 59 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.