Loksabha Election 2024 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
Telangana : ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಹಿನ್ನೆಲೆ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಯಿತು, ಈ ಮೂಲಕ ತೆಲಂಗಾಣದಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಿದೆ.
ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು ನೀಡುವಂತೆ ಕರೆ ನೀಡಿದರು.
Lok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಬಿಜೆಪಿಯವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು
Lokasabha Election 2024 :ಘಟಾನುಘಟಿ ನಾಯಕರೆಲ್ಲಾ ಮುಂಜಾನೆಯಿಂದಲೇ ಮತಗಟ್ಟೆಯತ್ತ ತೆರಳುತ್ತಿದ್ದಾರೆ. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬದವರು ಕೂಡಾ ತಮ್ಮ ಹಕ್ಕು ಚಲಾಯಿಸಿದ್ದಾರೆ.
Geetha Shivaraj Kumar : ಮುಸ್ಲಿಂ ಮತದಾರರ ಓಲೈಕೆಗೆ ಹಣೆಯಲ್ಲಿದ್ದ ಕುಂಕುಮ ಅಳಸಿಕೊಂಡು ಪ್ರಚಾರ ಸಭೆಯಲ್ಲಿ ಗೀತಾ ಶಿವರಾಜ್ ಕುಮಾರ್ ಪಾಲ್ಗೊಂಡಿದ್ದರೆಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಹೀಗೆ ಅಪಪ್ರಚಾರ ಮಾಡುವ ಮೊದಲು ವಾಸ್ತವವನ್ನು ಅರಿತುಕೊಳ್ಳಬೇಕು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
Lokasabha Election : ಕೆಲವರು ಮತದಾನದ ಬಗ್ಗೆ ನಿರ್ಲಕ್ಷ್ಯ ಮಾಡ್ತಾರೆ.ರಜೆ ಅನ್ನೋ ಕಾರಣಕ್ಕೆ ಮತದಾನದಂದು ಟ್ರಿಪ್ ಗೆ ಹೊರಡ್ತಾರೆ. ಹೀಗಾಗಿ ಮತದಾನ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಹೋಟೆಲ್ ಮಾಲೀಕರು ಸಜ್ಜಾಗಿದ್ದಾರೆ.
15 ಲಕ್ಷ ಹಣ ಎಷ್ಟು ಜನರ ಖಾತೆಗೆ ಹೋಗಿದೆ?ಎಷ್ಟು ಉದ್ಯೋಗ ಸಿಕ್ಕಿದೆ ಎಂದು ನಾನು, ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ನಾಯಕರು ಪ್ರಶ್ನೆ ಮಾಡುತ್ತಿದ್ದೇವೆ. ಇದಕ್ಕೆ ಮೊದಲು ಉತ್ತರಿಸಲಿ” ಎಂದು ಹೇಳಿದರು.
ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು ಎಂದು ಡಿ ಕೆ ಸುರೇಶ್ ಹೇಳಿದ್ದಾರೆ.
ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು.ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಲೆಕ್ಟ್ರೋಲ್ ಬಾಂಡ್ ಗಳ ಮೂಲಕವೇ ಸುಮಾರು 7,500 ಕೋಟಿ ರೂ.ಗಳ ಅಕ್ರಮ ನಡೆಸಿ, ಮೋದಿಯವರು ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ಅವರ ಮುಖವಾಡ ಕಳಚಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
Lokasabha Election 2024 :ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ.ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.