ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ.ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್ಎ ನಲ್ಲೇ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿಕೆ. 2 ಸಲ ವಿಪಕ್ಷದ ನಾಯಕನಾಗಿದ್ದ ವೇಳೆ ಪಕ್ಷ ಸಂಘಟನೆ ಮಾಡಿದ್ದೇನೆ. ಎರಡು ಸಲ ಬೆಳಗಾವಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ.
ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎನ್ನುವುದನ್ನು ಎಂದು ಬಹಿರಂಗಪಡಿಸಲಿ ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಲೋಕಸಭೆ ಪ್ರಚಾರಕ್ಕೆ ಪ್ರಧಾನಿ ರಾಜ್ಯ ಪ್ರವಾಸ. ಮೋದಿಯವರ ಪ್ರವಾಸ ಕಾರ್ಯಕ್ರಮದಲ್ಲಿ ಬದಲಾವಣೆ. ಕಲಬುರ್ಗಿ, ಶಿವಮೊಗ್ಗ ಜಿಲ್ಲೆಗಳಿಗೆ ಮಾತ್ರ ನಮೋ ಭೇಟಿ. ಕೋಲಾರ, ಧಾರವಾಡ, ಬೀದರ್ ಜಿಲೆಗಳ ಭೇಟಿ ರದ್ದು.
ಹೊಸ ವರ್ಷದ ಮೊದಲ ತಿಂಗಳೇ 132 ಇನ್ಸ್ಪೆಕ್ಟರ್ಗಳ ವರ್ಗಾವಣೆ. ಲೋಕಸಭೆ ಚುನಾವಣೆ ಮುನ್ನವೇ ಪೊಲೀಸ್ ಅಧಿಕಾರಿಗಳ ಟ್ರಾನ್ಸ್ಫರ್. ವರ್ಗಾವಣೆ ಮಾಡಿ ಆದೇಶ ಹೊರಡಿಸಿರೋ ರಾಜ್ಯ ಕಾಂಗ್ರೆಸ್ ಸರ್ಕಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.