ಏಪ್ರಿಲ್ 1 ರಂದು ಛತ್ತೀಸ್ ಗಡ್ ದ ಮುಖ್ಯಮಂತ್ರಿ ಭುಪೇಶ್ ಬಾಘೇಲ್ ತಮ್ಮ ವಿಭಿನ್ನವಾದ ಟ್ವೀಟ್ ನಿಂದ ಗಮನ ಸೆಳೆದಿದ್ದಾರೆ.ಈ ಟ್ವೀಟ್ ನಲ್ಲಿ ಅವರು ಪ್ರಧಾನಿ ಮೋದಿಗೆ ಕನ್ನಡಿಯೊಂದನ್ನು ಗಿಫ್ಟ್ ಗಾಗಿ ಬುಕ್ ಮಾಡಿದ್ದಾರೆ"
ಮೋದಿ ಜಿ ಕಿ ಸೇನಾ ಎಂದು ಕರೆದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ವಿಚಾರವಾಗಿ ಈಗ ಘಾಜಿಯಾಬಾದ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ನಿಂದ ಚುನಾವಣಾ ಆಯೋಗ ವರದಿ ಕೇಳಿದೆ.ಸಿಎಂ ಯೋಗಿ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ವರದಿಯಾದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಸಂಪೂರ್ಣವಾದ ವರದಿ ನೀಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.
ಚುನಾವಣೆಗೂ ಮೊದಲು ಫೇಸ್ ಬುಕ್ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ 687 ಪೇಜ್ ಗಳನ್ನು ಹಾಗೂ ಇತರ ಖಾತೆಗಳನ್ನು ಅನಧಿಕೃತ ನಡವಳಿಕೆಯಿಂದ ಸಂಘಟಿತವಾಗಿರುವ ಹಿನ್ನಲೆಯಲ್ಲಿ ಸೋಮವಾರದಂದು ಅವುಗಳನ್ನು ತೆಗೆದು ಹಾಕುವುದಾಗಿ ಸೋಮವಾರ ಫೇಸ್ ಬುಕ್ ಹೇಳಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸುವ ಮೂಲಕ ದಲಿತರ ಮತಗಳನ್ನು ವಿಭಜನೆ ಮಾಡಲು ಮುಂದಾಗಿದ್ದಾರೆ ಎಂದು ಬಿಎಸ್ಪಿ ಮಾಯಾವತಿ ಆರೋಪಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಬಿಹಾರದ ಬಕ್ಸಾರ್ ಜಿಲ್ಲೆಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಕೆ.ಕೆ. ಉಪಾಧ್ಯಾಯೊಂದಿಗೆ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಚೌಬೆ ಅಸಭ್ಯವಾಗಿ ವರ್ತಿಸಿದ್ದಾರೆ.
ಹಿಮಾಚಲ ಪ್ರದೇಶದ ಬಿಜೆಪಿ ಸಚಿವ ಅನಿಲ್ ಶರ್ಮಾ ಅವರು ಮಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಅವರ ಮಗ ಆಶ್ರೇ ಶರ್ಮಾ ವಿರುದ್ಧ ಪ್ರಚಾರ ಮಾಡುವಿದಿಲ್ಲವೆಂದು ಹೇಳಿದ್ದಾರೆ.
ಬೋರ್ಡಿಂಗ್ ಪಾಸ್ ಹಾಗೂ ಚಹಾ ಕಪ್ ಮೇಲೆ ಮೈ ಭಿ ಚೌಕಿದಾರ್ ಘೋಷಣೆ ಜೊತೆಗೆ ಮೋದಿ ಫೋಟೋ ಪ್ರಕಟಿಸಿದ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ರೈಲ್ವೆ ಸಚಿವಾಲಯಕ್ಕೆ ನೋಟಿಸ್ಗಳನ್ನು ಕಳುಹಿಸಿದೆ.ಈಗ ಎರಡು ಸಚಿವಾಲಯಗಳು ಶನಿವಾರದಂದು ಪ್ರತಿಕ್ರಿಯೆ ನೀಡಬೇಕಾಗಿದೆ.
ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಎಲ್.ಕೆ.ಅಡ್ವಾಣಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅಂತಹ ನಾಯಕರು ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸುವುದು ನಿಜಕ್ಕೂ ಗೌರವದ ಸಂಗತಿ ಎಂದು ಹೇಳಿದರು.
ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಮರು ಆಯ್ಕೆಯಾಗಬೇಕೆಂದು ರಾಜಸ್ಥಾನ ಗವರ್ನರ್ ಕಲ್ಯಾಣ್ ಸಿಂಗ್ ಹೇಳಿಕೆ ನೀಡಿದ್ದಕ್ಕೆ ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ವರದಿಯನ್ನು ಕೇಳಿದ್ದಾರೆ.
ಲೋಕಸಭೆ ಚುನಾವಣೆ ಮೊದಲು ಬಿಡುಗಡೆಯಾಗಲಿರುವ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ "ನಮ್ಮ ಪ್ರಣಾಳಿಕೆ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ ಹೊರತು ಕೇವಲ ಒಬ್ಬನ ಅಭಿಪ್ರಾಯವಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನರೇಂದ್ರ ಮೋದಿ ಅವರ 'ಮಿಷನ್ ಶಕ್ತಿ' ಘೋಷಣೆಯು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ತಮ್ಮ ಪಕ್ಷವನ್ನು ಉಲ್ಲೇಖಿಸಿಲ್ಲ ಅಥವಾ ತಮ್ಮ ಪರವಾಗಿ ಮತ ಚಲಾಯಿಸಲು ಸಹ ಮನವಿ ಮಾಡಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಳೆದ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ತಮ್ಮ ಕ್ಷೇತ್ರದ ವಾರಣಾಸಿಯಲ್ಲಿ ಒಂದೇ ಹಳ್ಳಿಗೆ ಭೇಟಿ ನೀಡಲು ಸಮಯ ಸಿಕ್ಕಿಲ್ಲ ಎನ್ನುವುದು ಆಶ್ಚರ್ಯವಾಗುತ್ತದೆ ಎಂದು ಪ್ರಿಯಂಕಾ ಗಾಂಧಿ ಹೇಳಿದರು.
ಇಂದು ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ವಿಧಾನಸಭೆ ಉಪ ಚುನಾವಣೆಗಾಗಿ ಟಿಟಿವಿ ದಿನಕರನ್ ಅವರ ಅಮ್ಮಾ ಮಕಲ್ ಮುನ್ನೆತ್ರ ಕಳಗಮ್ ಪಕ್ಷಕ್ಕೆ "ಉಡುಗೊರೆ ಪ್ಯಾಕ್" ಚಿಹ್ನೆಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.