ಎಪ್ರಿಲ್ 12 ರಂದು ಬಿಡುಗಡೆಯಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಕುರಿತ ಚಲನಚಿತ್ರಕ್ಕೆ ಈಗ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ. ಈ ಹಿನ್ನಲೆಯಲ್ಲಿ ಈಗ ಎ ಚಿತ್ರವನ್ನು ಏಪ್ರಿಲ್ 5 ರಂದು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಭಾನುವಾರ ಲಖನೌಕ್ಕೆ ಆಗಮಿಸಿದ ಬಳಿಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದಲ್ಲಿನ ರಾಜಕೀಯ ಬದಲಾವಣೆಗೆ ಜನರ ಬೆಂಬಲವನ್ನು ಕೋರಿ ಬಹಿರಂಗ ಪತ್ರ ಬರೆದರು.
ನಾನೂ ಚೌಕಿದಾರ್ ಎನ್ನುವ (#MainBhiChowkidar ) ಹ್ಯಾಶ್ ಟ್ಯಾಗ್ ಟ್ವೀಟರ್ ಅಭಿಯಾನ ಈಗ ಒಂದು ಹೆಜ್ಜೆ ಮುಂದೆ ಹೋಗಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ತಮ್ಮ ಖಾತೆಯ ಹೆಸರನ್ನು ಬದಲಿಸಿಕೊಳ್ಳುವ ಮೂಲಕ ಇದಕ್ಕೆ ಚಾಲನೆ ನೀಡಿದ್ದಾರೆ
ಒರಿಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಕೋರೈ ವಿಧಾನಸಭಾ ಕ್ಷೇತ್ರದಿಂದ ಕಾಜಲ್ ನಾಯಕ್ ಎನ್ನುವ ಮಂಗಳಮುಖಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದಿಂದ ಕಣಕ್ಕೆ ಇಳಿಯಲಿದ್ದಾರೆ. ಬಿಎಸ್ಪಿ ಪಕ್ಷದಿಂದ ಟಿಕೆಟ್ ದೊರಕುವ ಮೊದಲು ಹಲವು ಪಕ್ಷಗಳನ್ನು ಸಂಪರ್ಕಿಸಲಾಗಿತ್ತು ಆದರೆ ಯಾವ ಪಕ್ಷಗಳು ತಮಗೆ ಸೂಕ್ತ ಬೆಂಬಲ ನೀಡಲಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಆಧಿಕಾರಕ್ಕೆ ಬಂದಲ್ಲಿ ಬಡವರಿಗಾಗಿ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಜಾರಿಗೆ ತರಲಿದೆ.ಇದನ್ನು ನೇರವಾಗಿ ಬಡವರ ಖಾತೆಗೆ ಸಂದಾಯ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.
ರಾಜಸ್ಥಾನದ ಮುಖ್ಯ ಚುನಾವಣಾಧಿಕಾರಿ ಬಿಜೆಪಿ ಸಂಸದ ರಾಮಚಂದ್ರನ್ ಬೋಹ್ರಾ ಮತ್ತು ಕಾಂಗ್ರೆಸ್ ನಾಯಕ ಸುನಿಲ್ ಶರ್ಮಾ ಅವರಿಗೆ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘನೆ ಮಾಡಿದ್ದಕ್ಕೆ ಈಗ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಪಕ್ಷದಲ್ಲಿನ 75 ವರ್ಷದ ವಯೋಮಿತಿ ನಿಯಮದಿಂದ ಬಿಜೆಪಿ ಹಿಂದೆ ಸರಿಯಲು ನಿರ್ಧರಿಸಿದೆ .ಈ ಹಿನ್ನಲೆಯಲ್ಲಿ ಈಗ ಪಕ್ಷದ ಹಿರಿಯ ನಾಯಕರಿಗೆ ನಿರಾಳವಾಗಿದೆ.ಸಂಸದೀಯ ಸಮಿತಿ ಸಭೆಯಲ್ಲಿ ಪಕ್ಷದ ನಾಯಕರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಹಾವೇರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಯೋಧರ ಸಾವು ದೇಶದಲ್ಲಿ ಭಯೋತ್ಪಾದನೆಯನ್ನು ನಾಶ ಮಾಡಲೇಬೇಕೆಂಬ ಛಲ ಹುಟ್ಟಿಸಿದೆ. ಹೀಗಾಗಿ ಈಗಾಗಲೇ ಭದ್ರತಾ ಪಡೆ ತನ್ನ ಭಾಷೆಯಲ್ಲಿಯೇ ಭಯೋತ್ಪಾದಕರಿಗೆ ಉತ್ತರಿಸಿದೆ ಎಂದು ಮೋದಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.