LokSabha Elections 2024: ಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ #GoBackModi, #GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
LokSabha Elections 2024: ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಪ್ರಧಾನಿ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಎಂದರು ಅಂತಾ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ. ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ಅವಿನಾಭಾವ ಸಂಬಂಧವಿದೆ ಎನ್ನುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
How to add name in Electoral Voter list?: ಚುನಾವಣೆಯಲ್ಲಿ ಮತದಾನ ಮಾಡಬೇಕಾದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೀವು ಮತ ಚಲಾಯಿಸಲು ಸಾಧ್ಯವಿಲ್ಲ. ಹೀಗಾಗಿ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಬೇಕು.
Kangana Ranaut: ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಳು ಸಮೀಪಿಸುತ್ತಿವೆ. ಈ ತಿಂಗಳ 19 ರಂದು 102 ಲೋಕಸಭೆ ಕ್ಷೇತ್ರಗಳು ಸೇರಿದಂತೆ ಅರುಣಾಚಲ ಪ್ರದೇಶದ ಮೊದಲ ಹಂತದ ಮತದಾನ ನಡೆಯಲಿದೆ.
Loksabha elections 2024: ಜೆಡಿಎಸ್ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕರಿಗೆ ತೋರಿಸುತ್ತೇವೆಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ʼಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.