ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಸಿಎಂ ಜೊತೆ ನಡೆಸಿದ ಸಭೆ ಅಂತ್ಯಗೊಂಡಿದ್ದು, ಸಿಎಂ ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ.
West Bengal President Rule?: ಘಟನೆಯ ಬಗ್ಗೆ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮಾತನಾಡಿ, ʼವಿದ್ಯಾರ್ಥಿಗಳೂ ಪೊಲೀಸರ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಯುವಜನರಲ್ಲಿ ವಿಶೇಷವಾಗಿ ಮಹಿಳಾ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ನಿರಾಶೆಯ ಭಾವನೆ ಬೆಳೆಯುತ್ತಿದೆ. ನಾಗರಿಕರ ಮಟ್ಟಿಗೆ ಹೇಳುವುದಾದರೆ ಸರಕಾರ ಕ್ರಮಕ್ಕೆ ಆಗ್ರಹಿಸಿದರೂ ಕ್ರಮಕೈಗೊಳ್ಳದಿರುವುದು ಅವರೆಲ್ಲರ ಸಂಕಷ್ಟಕ್ಕೆ ಕಾರಣವಾಗಿದೆ. ಕೋಲ್ಕತ್ತಾ ಪೊಲೀಸರನ್ನು 'ಕ್ರಿಮಿನಲ್ ಮಾಡಲಾಗಿದೆ ಮತ್ತು ರಾಜಕೀಯಗೊಳಿಸಲಾಗಿದೆ' ಎಂದು ಆರೋಪಿಸಿದ್ದಾರೆ.
Lok Sabha Election 2024: ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲವೆಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಅಂತಾ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ ಅಂತಾ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Lok Sabha Election Results 2024: ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Election Commission: ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಚುನಾವಣಾ ಸಮಿತಿ ಅಭಿಪ್ರಾಯಪಟ್ಟಿದೆ.ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಗಂಗೋಪಾಧ್ಯಾಯ ಮಾಡಿದ ಹೇಳಿಕೆಗಳಿಗಾಗಿ ತೃಣಮೂಲ ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗವು ಕ್ರಮ ಕೈಗೊಂಡಿದೆ.
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
ಮಮತಾ ಬ್ಯಾನರ್ಜಿಯವರು ಬಿದ್ದು ಹಣೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಅವರ ಹಣೆಯ ಮಧ್ಯೆದಲ್ಲಿ ಗಾಯವಾಗಿದ್ದು, ಮುಖದ ಮೇಲೆ ರಕ್ತ ಸೋರುತ್ತಿದೆ. ಸದ್ಯ ಅವರನ್ನು ಕೋಲ್ಕತ್ತಾದ SSKM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Lok Sabha election: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಗೆ ರಾಜ್ಯದ 42 ಸ್ಥಾನಗಳಿಗೆ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.
LPG Cylinder Price: ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಪಿಜಿ ಸಿಲಿಂಡರ್ ದರ 2,000ರೂ.ಗೆ ಏರಿಕೆಯಾಗಬಹುದು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಜನವರಿ 22ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ
ಎಲ್ಲಾ ರಾಜಕೀಯ ಪಕ್ಷಗಳ ಮುಖ್ಯಸ್ಥರಿಗೆ ಆಹ್ವಾನ
ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ಆಮಂತ್ರಣ
ಮಲ್ಲಿಕಾರ್ಜುನ ಖರ್ಗೆ ಮತ್ತು ಅಖಿಲೇಶ್ ಯಾದವ್
ಮಮತಾ ಬ್ಯಾನರ್ಜಿ ಸೇರಿದಂತೆ ಹಲವರಿಗೆ ಆಹ್ವಾನ
Mamata Banerjee : ಅಹಮದಾಬಾದ್ ಬದಲಿಗೆ ಕೋಲ್ಕತ್ತಾ ಅಥವಾ ಮುಂಬೈನಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತೇ? ಈ ರೀತಿಯ ವಿಚಾರದ ಬಗ್ಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.
LokSabha Elections 2024: ಶೇ.52ರಷ್ಟು ಮುಸ್ಲಿಂ ಮತದಾರರು ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಬಯಸಿದ್ದಾರೆ. ಶೇ.14ರಷ್ಟು ಮತದಾರರು ಕೇಜ್ರಿವಾಲ್ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ರಕ್ಷಾ ಬಂಧನ ದಿನದಂದು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ನಿವಾಸ 'ಜಲ್ಸಾ'ದಿಂದ ಹೊರಬರುವ ವಿಡಿಯೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
Mahaghat Bandan: INDIA ಒಕ್ಕೂಟವನ್ನು ಟೀಕಿಸಿದ ಪ್ರಧಾನಿ ಮೋದಿಯವರೇ, ದೇಶಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾಪಟಗಳಿಗೆ ಲೈಂಗಿಕ ಕಿರುಕುಳ ನೀಡಿದವನ ಬಗ್ಗೆ ಮಾತಾಡಿ, ಮಾತನಾಡಬೇಕಿರುವ ಸಂಗತಿಗಳನ್ನು ತಾವು ನಿರ್ಲಕ್ಷಿಸುವುದೇಕೆ? ಎಂದು ಪ್ರಶ್ನಿಸಿದೆ.
ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧದ ಟೀಕಾ ಪ್ರಹಾರವನ್ನು ತೀವ್ರಗೊಳಿಸಿರುವ ಬಿಜೆಪಿ, ಮಮತಾ ಬ್ಯಾನರ್ಜಿ ಸರ್ಕಾರ ಪತನವಾಗುವುದು ಕೇವಲ ಸಮಯದ ವಿಷಯ ಎಂದು ಭಾನುವಾರ ಹೇಳಿದೆ.ಉತ್ತರ 24 ಪರಗಣ ಜಿಲ್ಲೆಯ ಬೊಂಗಾವ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ಸಂಸದ ಶಾಂತನು ಠಾಕೂರ್, ಟಿಎಂಸಿ ಸರ್ಕಾರ ಐದು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಿದರು.
West Bengal News: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ಪುರುಲಿಯಾ, ಬಿರ್ಭುಮ್, ಜಲ್ಪೈಗುರಿ ಮತ್ತು ದಕ್ಷಿಣ 24 ಪರಗಣಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಮುಂಬರುವ ಪಂಚಾಯತ್ ಚುನಾವಣೆಗೆ ರಾಜ್ಯಾದ್ಯಂತ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ನ ಆದೇಶದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಮತ್ತು ರಾಜ್ಯ ಸರಕಾರ ಶನಿವಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿರುವುದರಿಂದ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ.
Mamata Banerjee Reaction: ಶುಕ್ರವಾರ ಮೇ 19ರಂದು ಆರ್ಬಿಐ ಪ್ರಕಟಿಸಿರುವ ಒಂದು ನಿರ್ಧಾರದಿಂದ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಯಾಗಿದೆ. 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಆರ್ಬಿಐ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಪರ - ವಿರೋಧ ಹೇಳಿಕೆಗಳು ಬರಲಾರಂಭಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.