ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಕಿಡಿಕಾರಿದರು.
ಇಂದಿನಿಂದ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಆಗಲಿದೆ. ಪ್ರತೀ ಲೀಟರ್ ಹಾಲು ಮೊಸರಿಗೆ ಎರಡು ರೂಪಾಯಿ ಹೆಚ್ಚಿಸಿ ಕೆಎಂಎಫ್ ಆದೇಶ ಹೊರಡಿಸಿದೆ. ಸಾಕಷ್ಟು ಚರ್ಚೆ ಬಳಿಕ ಕೆಎಂಎಫ್ ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
Milk Price Hike: ಡಬಲ್ ಟೋನ್ಡ್ ಹಾಲಿನ ಬೆಲೆ 38 ರೂ., ಟೋನ್ಡ್ ಹಾಲು 39 ರೂ., ಹೋಮೋಜೆನೈಸ್ಡ್ ಟೋನ್ಡ್ ಹಾಲು ರೂ. 40, ಸ್ಪೆಷಲ್ ಮಿಲ್ಕ್ ರೂ. 45, ಶುಭಂ ಹಾಲು ರೂ. 45, ಸಮೃದ್ಧಿ ಹಾಲು ರೂ. 50 ಮತ್ತು ಸಂತೃಪ್ತಿ ಹಾಲಿನ ಬೆಲೆ 52 ರೂ ಆಗಿದೆ. ಇನ್ನು ನಂದಿನಿ ಮೊಸರಿನ ಬೆಲೆ 47 ರೂ. ಆಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಹಣದುಬ್ಬರದಿಂದ ಈಗಾಗಲೇ ತತ್ತರಿಸಿರುವ ಜನತೆಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಇದೆ. ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ನಿರ್ಧರಿಸಿದ್ದು, ಇಂದಿನಿಂದ ಹಾಲಿನ ದರ ಮೂರು ರೂಪಾಯಿ ಹೆಚ್ಚಳವಾಗಲಿದೆ ಎಂದು ಹೇಳಲಾಗುತ್ತಿದೆ.
ಅಮುಲ್ ಮತ್ತು ಮದರ್ ಡೈರಿ ತನ್ನ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಪ್ರತೀ ಲೀಟರ್ ಹಾಲಿನ ಬೆಲೆಯಲ್ಲಿ ಎರಡು ರೂಪಾಯಿಗೆ ಏರಿಸಿದ್ದು, ಈ ಮೂಲಕ ಇದೇ ವರ್ಷ ಎರಡನೇ ಬಾರಿಗೆ ಬೆಲೆ ಏರಿಕೆ ಮಾಡಿದೆ. ಇಂದಿನಿಂದಲೇ ಹಾಲಿನ ಬೆಲೆ ಪ್ರತಿ ಲೀಟರ್ಗೆ ಎರಡು ರೂಪಾಯಿ ಏರಿಕೆ ಆಗಲಿದೆ.
ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ದರ ಏರಿಕೆ ಬಗ್ಗೆ ಪ್ರಸ್ತಾಪ ಮುಂದಿಡಲಾಗಿದೆ. ಹಾಲಿನ ದರವನ್ನು (Milk Price) 2 ರಿಂದ 3 ರೂ.ವರೆಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.