K Annamalai : ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ತಮಿಳುನಾಡಿನಲ್ಲಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಡಿಎಂಕೆ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ ಮತ್ತು ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಈ ಪ್ರಕ್ರಿಯೆಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಂಚಲನ ಮೂಡಿಸಿದ್ದಾರೆ. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪತನವಾಗುವವರೆಗೆ ತಾವು ಶೂ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.
ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.
Ram Mandir Inauguration : ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಭಾನುವಾರ ಟ್ವೀಟ್ ಆರೋಪಿಸಿದ್ದಾರೆ.
Cauvery Water Sharing Dispute: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ನಾಡಿಗೆ ಕಳ್ಳತನದಿಂದ ಬೇಕಾಬಿಟ್ಟಿಯಾಗಿ ನೀರು ಬಿಟ್ಟು, ರಾಜ್ಯದ ರೈತರಿಗೆ ದ್ರೋಹ ಬಗೆದದ್ದು ಮಾತ್ರವಲ್ಲದೆ, ರೈತರಿಗೆ ಭತ್ತ ಬೆಳೆಯಬೇಡಿ ಎಂದು ಕೃಷಿ ಸಚಿವರು ಬೆದರಿಕೆ ಹಾಕಿ ಕರ್ನಾಟಕವನ್ನು ದುಸ್ಥಿತಿಗೆ ತಳ್ಳಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
Kaveri River water dispute: ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಅಂತಾ ಡಿಕೆಶಿ ತಿಳಿಸಿದರು.
Kaveri River water dispute: KRS ಡ್ಯಾಂನಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಇದ್ದು, ಇನ್ನುಳಿದ 12 ಟಿಎಂಸಿ ನೀರು ಮಾತ್ರ ಕುಡಿಯಲು ಬಳಕೆಗೆ ಯೋಗ್ಯವಾಗಿರಲಿದೆ. ಕನಿಷ್ಠ ಮಟ್ಟದಲ್ಲಿರುವ ನೀರನ್ನು ತಮಿಳುನಾಡಿಗೆ ಹರಿಬಿಟ್ಟರೆ ಬೆಂಗಳೂರಿಗೆ ಕಾವೇರಿ ನೀರಿನ ಅಭಾವ ಫಿಕ್ಸ್ ಆಗಲಿದೆ.
Kaveri River water dispute: ಭತ್ತ ನಾಟಿ ಮಾಡಿರುವ ಕಾವೇರಿ ಕೊಳ್ಳದ ರೈತರು ಒಣಗುತ್ತಿರುವ ಬೆಳೆ ನೋಡಿ ಕಣ್ಣೀರು ಸುರಿಸುತ್ತಿದ್ದಾರೆ. ಇದಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೇ 30 ಟಿಎಂಸಿ ನೀರು ಬೇಕು. ಈ ಯಾವ ಅಂಶಗಳನ್ನೂ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ನ್ಯಾಯಾಧಿಕರಣಕ್ಕೆ ಅರಿಕೆ ಮಾಡುವಲ್ಲಿ ಸೋತು ಕನ್ನಡಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಬಿಜೆಪಿ ಕುಟುಕಿದೆ.
Mahaghat Bandan: INDIA ಒಕ್ಕೂಟವನ್ನು ಟೀಕಿಸಿದ ಪ್ರಧಾನಿ ಮೋದಿಯವರೇ, ದೇಶಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾಪಟಗಳಿಗೆ ಲೈಂಗಿಕ ಕಿರುಕುಳ ನೀಡಿದವನ ಬಗ್ಗೆ ಮಾತಾಡಿ, ಮಾತನಾಡಬೇಕಿರುವ ಸಂಗತಿಗಳನ್ನು ತಾವು ನಿರ್ಲಕ್ಷಿಸುವುದೇಕೆ? ಎಂದು ಪ್ರಶ್ನಿಸಿದೆ.
CM Kejriwal Meets CM Stalin: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷ ನಾಯಕರನ್ನು ನಿರಂತರವಾಗಿ ಭೇಟಿ ನಡೆಸಿ ಮಾತುಕತೆ ನಡೆಸುತ್ತಿದ್ದಾರೆ ಮತ್ತು ಬೆಂಬಲವನ್ನು ಕೋರುತ್ತಿದ್ದಾರೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶುಕ್ರವಾರದಂದು ಸಂಸತ್ತಿನಿಂದ ರಾಹುಲ್ ಗಾಂಧಿ ಅವರನ್ನು ಪದಚ್ಯುತಗೊಳಿಸಿದ್ದು ಪ್ರಜಾಪ್ರಭುತ್ವದ ಕೊಲೆ ಎಂದು ಹೇಳಿದ್ದಾರೆ.ಠಾಕ್ರೆಯವರ ಪ್ರಕಾರ ಕಳ್ಳನನ್ನು ಕಳ್ಳ ಎಂದು ಕರೆಯುವುದು ಈ ದೇಶದಲ್ಲಿ ಅಪರಾಧವಾಗಿ ಮಾರ್ಪಟ್ಟಿದೆ ಮತ್ತು ಇದು ಸರ್ವಾಧಿಕಾರದ ಅಂತ್ಯದ ಆರಂಭ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
Ration Card Latest News : ಇದೀಗ ಸಂಕ್ರಾತಿ ಹಬ್ಬ ಸಮೀಪಿಸುತ್ತಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಉಡುಗೊರೆ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಇದೀಗ ಸರ್ಕಾರ ಘೋಷಣೆಯಂತೆಯೇ ನಡೆದುಕೊಳ್ಳುತ್ತಿದೆ.
ತಮಿಳುನಾಡಿನ ದಿಂಡಿಗಲ್ನಲ್ಲಿರುವ ಗಾಂಧಿಗ್ರಾಮ್ ರೂರಲ್ ಇನ್ಸ್ಟಿಟ್ಯೂಟ್ನ 36ನೇ ಘಟಿಕೋತ್ಸವ ಸಮಾರಂಭದಲ್ಲಿ ಸಂಗೀತ ಮಾಂತ್ರಿಕ ಇಳಯರಾಜ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.ಸಮಾರಂಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ರಾಜ್ಯಪಾಲ ಆರ್.ಎನ್.ರವಿ ಉಪಸ್ಥಿತರಿದ್ದರು.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ರಾಜ್ಯದ ಸುಮಾರು 5000 ವಿದ್ಯಾರ್ಥಿಗಳ ವಾಪಸಾತಿ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ.
ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಇಂದು 31 ಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದು, ಅವರು ಹೊಸದಾಗಿ ಪ್ರಾರಂಭಿಸಿರುವ "ಆಲ್ ಇಂಡಿಯಾ ಫೆಡರೇಶನ್ ಫಾರ್ ಸೋಶಿಯಲ್ ಜಸ್ಟಿಸ್" ಗೆ ಸೇರುವಂತೆ ಒತ್ತಾಯಿಸಿದ್ದಾರೆ.
ಕೇರಳದ ಪಿಣರಾಯಿ ವಿಜಯನ್ ಮತ್ತು ತಮಿಳುನಾಡಿನ ಎಂಕೆ ಸ್ಟಾಲಿನ್ ಭಾನುವಾರ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳ ನಿಯೋಜನೆ ನಿಯಮಗಳಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಬದಲಾವಣೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನಾನು ಹೆಚ್ಚಾಗಿ ಮೊಮ್ಮಕ್ಕೊಳೊಂದಿಗೆ ಸಮಯ ಕಳೆಯುತ್ತೇನೆ. ನಿತ್ಯ ಬೆಳಗ್ಗೆ ಬೇಗ ಎದ್ದು ವಾಕಿಂಗ್ ಮತ್ತು ಯೋಗ ಮಾಡುತ್ತೇನೆ. 10 ದಿನಗಳಿಗೊಮ್ಮೆ ಸೈಕ್ಲಿಂಗ್ ಮಾಡುತ್ತೇನೆ ಅಂತಾ ಸ್ಟಾಲಿನ್ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.