ಬೆಂಗಳೂರು: ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ" ಎಂದರು.
Money Laundering: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಎರಡು ಕೋಟಿ ನಲವತ್ತ್ಮೂರು ಲಕ್ಷ ರೂಪಾಯಿಗಳನ್ನ ಐಡಿಬಿಐ ಬ್ಯಾಂಕ್'ನ ಮೂರು ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿತ್ತು.
Online Betting Fraud: ಈ ನಕಲಿ ಕಂಪನಿಗಳು ಬೆಟ್ಟಿಂಗ್ ಮತ್ತು ಜೂಜಾಟದ ನೆಪದಲ್ಲಿ ಹಣ ಸಂಗ್ರಹಿಸಿ ವಂಚನೆ ಚಟುವಟಿಕೆಗಳಲ್ಲಿ ತೊಡಗಿದ್ದವು. ಆರೋಪಿಗಳು ಬೆಸ್ಟಾರ್ಟೆಕ್, ಖೆಲೋ24ಬೆಟ್ ಮುಂತಾದ ವೆಬ್ಸೈಟ್ಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದರು.
ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಪ್ರಕರಣದಲ್ಲಿ ದೆಹಲಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಇದೆ ವೇಳೆ ಬಾಲಿವುಡ್ ನಟಿಯರಾದ ನೋರಾ ಫತೇಹಿ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗಿನ ಸಂಪರ್ಕವನ್ನು ಅನ್ವೇಷಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಅವರನ್ನು ಆಗಸ್ಟ್ 8ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಮತ್ತೊಂದೆಡೆ, ಸಂಜಯ್ ರಾವತ್ ಅವರು ಇಡಿಯ ಹಲವು ಪ್ರಶ್ನೆಗಳಿಂದ ತೊಂದರೆಗೀಡಾಗಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಸಮನ್ಸ್ ನೀಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿಶೇಷ ಕೋರ್ಟ್ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಇತ್ತೀಚೆಗಷ್ಟೇ ಚಾರ್ಜ್ಶೀಟ್ ಸಲ್ಲಿಸಿದ್ರು. ಅದರಂತೆ ಡಿ.ಕೆ.ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿತ್ತು. ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗಲಿದೆ.
ರಾಹುಲ್ ಗಾಂಧಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ರಾಹುಲ್ ಇಡಿ ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ್ದಾರೆ. ಜೂನ್ 5 ರಂದು ದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ.
ಬ್ರಿಟನ್ನ ಈ ಕ್ರಮವನ್ನು ಪಾಕಿಸ್ತಾನ ವಿರೋಧಿಸಿದೆ. ಯುಕೆ ತನ್ನ ನಿರ್ಧಾರವನ್ನು ಪರಿಶೀಲಿಸಬೇಕು, ಏಕೆಂದರೆ ಅದು ಸತ್ಯಗಳನ್ನು ಆಧರಿಸಿಲ್ಲ ಎಂದು ಇಸ್ಲಾಮಾಬಾದ್ ಲಂಡನ್ಗೆ ಮನವಿ ಮಾಡಿದೆ.
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್ ಹಗರಣ ಬೆಳಕಿಗೆ ಬಂದ ನಂತರ ಸಂಜಯ್ ಗುಲಾಟಿ ತೀವ್ರ ಒತ್ತಡದಲ್ಲಿದ್ದರು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರು ಬ್ಯಾಂಕಿನಲ್ಲಿ ದೊಡ್ಡ ಮೊತ್ತದ ಹಣ ಠೇವಣಿದಾರರಾಗಿದ್ದರು. ನಾಲ್ಕು ಖಾತೆಗಳಲ್ಲಿ ಸುಮಾರು 80 ಲಕ್ಷ ರೂ. ಠೇವಣಿ ಇಟ್ಟಿದ್ದರು ಎನ್ನಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ, ಡಿ.ಕೆ.ಶಿವಕುಮಾರ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಉದ್ಯಮಿ ರತುಲ್ ಪುರಿಯನ್ನು ಬುಧವಾರ ಹಾಜರುಪಡಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಪ್ರೊಡಕ್ಷನ್ ವಾರಂಟ್ ಜಾರಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.