ನನ್ನ ವಿರುದ್ದ ಮಾಡಿರುವ ಆರೋಪದಲ್ಲಿ ನಾನು ಎಪಿಎಂಸಿ ಸಚಿವನಾಗಿರಲಿಲ್ಲ ಆಗ ಗೃಹ ಸಚಿವನಾಗಿದ್ದೆ, ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರೂ. ಜೊತೆಗೆ ಬಡ್ಡಿ ಸಮೇತ 52 ಕೋಟಿ ರೂ ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು..
ಬಿಜೆಪಿಗರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮೂಡಾದಲ್ಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದ್ದು, ಅವರ ವಿರುದ್ಧ ದೂರು ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ..
ವಾಲ್ಮೀಕಿ ನಿಗಮದ ಹಗರಣದಲ್ಲಿಯೂ ಬಹಳ ತಪ್ಪುಗಳು ಆಗಿವೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ಧರೋಡೆ ಮಾಡಿದ್ದಾರೆ. ಸರ್ಕಾರ ಕೂಡಲೇ ರಾಜೀನಾಮೆ ಕೊಡಬೇಕು. ಈ ಹಗರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.