ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.
ಮುಡಾದಲ್ಲಿ ಸೈಟ್ ಅಕ್ರಮ ಆರೋಪ ವಿಚಾರ
ಇದು ಬಿಜೆಪಿ ಅಧಿಕಾರದ ಕಾಲದಲ್ಲಿ ಆಗಿರೋದು
ನನ್ನ ಹೆಂಡತಿಗೆ ಹಿಂದೆ ಸೈಟ್ ಹಂಚಲಾಗಿತ್ತು
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ನಾನು ಅಧಿಕಾರದಲ್ಲಿದ್ದಾಗ ಜಾಗ ತಗೊಂಡಿಲ್ಲ
ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ
ಸಾವಿರಾರು ಕೋಟಿ ರೂ.ಕರ್ಮಕಾಂಡ ಹೊರ ಬರ್ತಿದೆ
ಅಧಿವೇಶನದಲ್ಲಿ ಈ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡ್ತೇವೆ
ಬೆಂಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ
ಅಕ್ರಮದ ಫಲಾನುಭವಿಗಳು ತಲೆದಂಡ ಆಗೋವರೆಗೆ ಹೋರಾಟ
ಮೈಸೂರು ಮುಡಾ ಬಹುಕೋಟಿ ಹಗರಣ ಪ್ರಕರಣ
ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಎತ್ತಂಗಡಿ ಹಿನ್ನೆಲೆ
ನೂತನ ಮುಡಾ ಆಯುಕ್ತರು, ಕಾರ್ಯದರ್ಶಿ ನೇಮಕ
ರಾಜ್ಯ ಸರ್ಕಾರದಿಂದ ನೂತನ ಆಯುಕ್ತರಾಗಿ ಎ.ಎನ್.ರಘುನಂದನ
ಮುಡಾ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ನೇಮಕ
MUDA fraud case: 4,000 ಕೋಟಿ ರೂ. ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.