ಪ್ರತಿಪಕ್ಷದಲ್ಲಿ ಎರಡು ಡಜನ್ ಅಭ್ಯರ್ಥಿಗಳು ಪ್ರಧಾನಿ ಹುದ್ದೆಗೆ ಕಾಯುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಪ್ರತಿಪಕ್ಷಗಳನ್ನು ಲೇವಡಿ ಮಾಡಿದ್ದಾರೆ.
ಬಿಜೆಪಿ ಅವರನ್ನು ಎನ್ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಬಹುದು ಅಥವಾ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಆಗಿ ಜಮ್ಮು ಮತ್ತು ಕಾಶ್ಮೀರದ ಜವಾಬ್ದಾರಿಯನ್ನು ನೀಡಬಹುದು ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಖಾತೆ ನಿಭಾಯಿಸುತ್ತಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನಖ್ವಿ ರಾಜ್ಯಸಭೆಯ ಅಧಿಕಾರಾವಧಿ ನಾಳೆ ಕೊನೆಗೊಳ್ಳಲಿದೆ. ಇಂದಿನ ಸಚಿವ ಸಂಪುಟ ಸಭೆಯ ನಂತರ ಅವರ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರದಂದು ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಾ ದೇಶದಲ್ಲಿ ಎರಡು ಭಾರತಗಳಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು 'ಇಂದಿರಾ ಈಸ್ ಇಂಡಿಯಾ' ನಂಬಿಕೆಯಿಂದ ಹೊರಬರಬೇಕು ಎಂದು ಹೇಳಿದರು.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಕಾನೂನು ಜಾರಿಗೆ ಬಂದಾಗಿನಿಂದ ಟ್ರಿಪಲ್ ತಲಾಖ್ ಪ್ರಕರಣಗಳಲ್ಲಿ ಶೇಕಡಾ 82 ರಷ್ಟು ಕುಸಿತ ಕಂಡುಬಂದಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡಿಸಿದ ಕ್ರಮವನ್ನು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಸಮರ್ಥಿಸಿಕೊಂಡಿದ್ದಾರೆ. ತ್ರಿವಳಿ ಮಸೂದೆಗೆ ವಿಚಾರವಾಗಿ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕಿಡಿ ಕಾರಿದ ನಖ್ವಿ, ಈ ಮಸೂದೆಗೆ ಧರ್ಮಕ್ಕೂ ತಪ್ಪು ಆಚರಣೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.