ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿ, ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ್ತು ಸಚಿವರು ಜನ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವ ಬದಲು ಭ್ರಷ್ಟಚಾರದಲ್ಲಿ ತೊಡಗಿದ್ದಾರೆ: ಲಕ್ಷ್ಮೀ ಅಶ್ವಿನ್ಗೌಡ
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
ರಾಜಕೀಯದಲ್ಲಿ ಒಂದೊಂದು ನಿಮಿಷಕ್ಕೆ ಒಂದೊಂದು ತಿರುವು ಇರಲಿದೆ. ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿರುವ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ವ್ಯಂಗ್ಯವಾಡಿದ್ದಾರೆ.
Hanuma Dhwaja Row: ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಎಷ್ಟು ಜನರನ್ನು ಬಂಧಿಸುತ್ತೀರಿ ಬಂಧಿಸಿ ನೋಡೋಣ ಅಂಥಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಪ್ರತಿಭಟನೆ ನೀತಿ ಸಂಹಿತೆ ಜಾರಿಯಾಗುವ ತನಕ ನಿಲ್ಲಲ್ಲವೆಂದು ಎನ್.ಮಹೇಶ್ ಎಚ್ಚರಿಕೆ ನೀಡಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಮಾಡಲು ಬಹಳಷ್ಟು ಕೆಲಸಗಳಿವೆ ಅದನ್ನು ಅವರು ಮಾಡಲಿ, ಸಾವರ್ಕರ್ ಅವರನ್ನು ವೀರ ಸಾವರ್ಕರ್ ಎಂದು ಕರೆದಿದ್ದು ಇಂದಿರಾ ಗಾಂಧಿ ಎಂದು ಮಾಜಿ ಶಾಸಕ ಎನ್.ಮಹೇಶ್ ಸಚಿವ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದರು.
N Mahesh on Congress Government Schemes: ಅಬಕಾರಿ ಸುಂಕವನ್ನು ಶೇ.20ರಷ್ಟು ಏರಿಕೆ ಮಾಡಿ ಗಂಡನ ಜೇಬಿನಿಂದ ಹಣ ತೆಗೆದು ಹೆಂಡತಿ ಬ್ಯಾಗಿಗೆ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಎನ್.ಮಹೇಶ್ ಕಾಂಗ್ರೆಸ್ ಯೋಜನೆಗಳ ಬಗ್ಗೆ ಲೇವಡಿ ಮಾಡಿದರು.
ಮಾನಸಿಕ ಒತ್ತಡ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ. ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು. ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತಿದ್ದೇವೆ. ಆ ಒತ್ತಡವೇ ಅವರನ್ನು ಬಲಿ ಪಡೆಯಿತು ಎಂದು ಕಂಬನಿ ಮಿಡಿದಿದ್ದಾರೆ.
ಮತದಾರರು, ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ದಲಿತ ರಾಜಕಾರಣಿಗಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿಕೊಂಡರು.
ನಮಗೆ ಟೋಪಿ ಹಾಕಿದವರು ಬಿಜೆಪಿಗೂ ಟೋಪಿ ಹಾಕ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಎನ್.ಮಹೇಶ್ ಕಿಡಿಕಾರಿದ್ದಾರೆ. ಜೆಡಿಎಸ್ನ್ನು ಯಾಕೆ ಬಿಟ್ಟು ಹೋದ್ರು ಅಂತಾ ಹೇಳಬೇಕು. ಹಗುರವಾಗಿ ಚುನಾವಣೆ ವೇಳೆ HDK ಮಾತಾಡಬಾರದು ಎಂದು ಕೆಆರ್ಪೇಟೆಯಲ್ಲಿ ಶಾಸಕ ಎನ್.ಮಹೇಶ್ ಹೇಳಿದ್ರು.
ಅರಿಶಿಣದ ಬೆಲೆ ಪಾತಾಳಕ್ಕೆ ಕುಸಿತ ಕಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಚಾಮರಾಜನಗರಕ್ಕೆ ಕರೆತಂದು ಅರಿಶಿಣ ಉತ್ಪನ್ನ ತಯಾರಿಕೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.
ಅಬಕಾರಿ ಸಚಿವ ಹೆಚ್ ನಾಗೇಶ್ ಗೆ ಕೊಕ್ ಕೊಟ್ಟು, ಆ ಸ್ಥಾನಕ್ಕೆ ಬಿಎಸ್ ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಅವರನ್ನು ತರಲು ಯಡಿಯೂರಪ್ಪ ಸಿದ್ದತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ನ್ಯೂಸ್ ಕೇಳಿ ಅಬಕಾರಿ ಸಚಿವ ಹೆಚ್ ನಾಗೇಶ್ ಗಾಬರಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.