ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು NDA ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ.
Loksabha Election 2024 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
Bihar Political Crisis: ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ́ಮಹಾಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ, ಹೀಗಾಗಿ ನಾನು ಈ ನಿರ್ಧಾರ ಮಾಡಿದ್ದೇನೆ ಅಂತಾ ಹೇಳಿದ್ದಾರೆ. 2022ರ ಆಗಸ್ಟ್ನಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ NDA ಜೊತೆಗಿನ ಮೈತ್ರಿ ಮುರಿದು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಿದ್ದರು. ಇದೀಗ 18 ತಿಂಗಳ ಬಳಿಕ ಮತ್ತೆ ಅವರು NDAಗೆ ಮರಳಿದ್ದಾರೆ.
ಶಿರೋಮಣಿ ಅಕಾಲಿ ದಳ (ಎಸ್ಎಡಿ) ನಂತರ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (ಆರ್ಎಲ್ಪಿ) ಮುಖ್ಯಸ್ಥ ಹನುಮಾನ್ ಬೆನಿವಾಲ್ ಕೂಡ ಶನಿವಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ ಹೊರನಡೆದರು. \ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾನ್ಪುರದಲ್ಲಿ ರೈತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬೆನಿವಾಲ್, ಬೈ-ಬೈ. ನಾವು ಎನ್ಡಿಎಯನ್ನು ತೊರೆಯುತ್ತಿದ್ದೇವೆ.ದೇಶದ ರೈತರಗಿಂತ ಯಾವುದು ಮುಖ್ಯವಲ್ಲ ಎಂದು ಹೇಳಿದರು.
ಈ ತಿಂಗಳ ಆರಂಭದಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಬಗ್ಗೆ ಕೇಂದ್ರದಲ್ಲಿ ಭಾರತೀಯ ಜನತಾದಳದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ದಿಂದ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಹೊರಗುಳಿದಿದೆ ಎಂದು ಶನಿವಾರ ಪಂಜಾಬ್ ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಪ್ರಕಟಿಸಿದ್ದಾರೆ.
ಬಿಹಾರದಲ್ಲಿ ನಡೆಯಲಿರುವ ವಿಧಾನಸಭೆಯನ್ನು ಎನ್ಡಿಎ ಒಕ್ಕೂಟ ನಿತೀಶ್ ಕುಮಾರ್ ನೇತೃತ್ವದಲ್ಲೇ ಎದುರಿಸಲಿದೆ ಎಂದು ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.