ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ನನಗೆ ಇಡಿ ನೋಟಿಸ್ ಬಂದಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಆದರೆ, ದೈರ್ಯದಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಮತ್ತೆ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಮಾಡಿದೆ.
ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳಿಂದ ಸೋನಿಯಾ ಗಾಂಧಿ ವಿಚಾರಣೆ ನಡೆಯಲಿದೆ. ಮತ್ತೊಂದೆಡೆ ED ವಿಚಾರಣೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.
ಸುಳ್ಳು ಆರೋಪಗಳ ಮೇಲೆ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಸೂಕ್ತ ದಾಖಲೆಗಳಿದ್ದರೆ ಕೊಟ್ಟು ಅರೆಸ್ಟ್ ಮಾಡಿ.. ಬೇಡ ಅಂದವರು ಯಾರು ? ನಿಮಗೆ ದೇಶದ ಸಂಪತ್ತಿನ ಬಗ್ಗೆ ಅಷ್ಟು ಕಾಳಜಿ ಇದ್ದರೆ ಅಮಿತ್ ಶಾ ಮಗನ ಆಸ್ತಿ 15 ಸಾವಿರ ಪ್ರತಿಶತ ಹೆಚ್ಚಳವಾಗಿದೆ.. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಮೇಲಿನ ED ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಯಲಿದೆ. ಇಂದು ಕಾಂಗ್ರೆಸ್ ನಾಯಕರು ದೇಶಾದ್ಯಂತ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ನಾಳೆ ಎಲ್ಲಾ ಜಿಲ್ಲಾಧಿಕಾರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ..
National Herald Case: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ಸತತ ಮೂರನೇ ದಿನವೂ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಅವರ ಪಕ್ಷ, ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ವಿಚಾರಣೆ ಸಂಬಂಧ ದೇಶದಾದ್ಯಂತ ಕಾಂಗ್ರೆಸ್ ಬೃಹತ್ ಹೋರಾಟ ನಡೆಸಿತು. ಆದ್ರೆ ಈ ಬಗ್ಗೆ ರಾಜ್ಯದ ಕಮಲ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಇಡಿ ಅಧಿಕಾರಗಳು ತಮ್ಮ ಕೆಲಸ ಮಾಡುತ್ತಿದ್ದಾರೆ ಅಷ್ಟೇ ಅಂತ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ನಡೆಸಿಲ್ಲ ಅನ್ನೋದಾದ್ರೆ ವಿಚಾರಣೆಗೆ ಯಾಕೆ ಭಯ ಪಡುತ್ತಿದ್ದಾರೆ ಎಂದು ಕಮಲ ನಾಯಕರು ಪ್ರಶ್ನೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.