Channapatna Assembly By-Election: ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಯೋಗೇಶ್ವರ್ ಕಾಂಗ್ರೆಸ್ಗೆ ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್ಡಿಎದಲ್ಲಿ ಯೋಗೇಶ್ವರ್ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆಂದು ಆರ್.ಅಶೋಕ್ ಹೇಳಿದ್ದಾರೆ.
One Nation One Election: 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆಗೆ ಪ್ರಧಾನಿ ಮೋದಿಯವರ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಂದೇ ಬಾರಿ ನಡೆಸುವ ಮಹತ್ವದ ಯೋಜನೆ ಇದಾಗಿದೆ.
One Nation One Election: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್ನಲ್ಲಿ ವರದಿ ಸಲ್ಲಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ನಾನು ಕಾಂಗ್ರೆಸ್ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತಾ ಗೊತ್ತಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.
ನೀತಿ ಆಯೋಗದ ಸಭೆಗೆ ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಭಿವೃದ್ಧಿ ಮತ್ತು ಆ ರಾಜ್ಯಗಳ ಜನರ ಹಿತದೃಷ್ಟಿಯಿಂದ ಒಳ್ಳೆಯದಲ್ಲವೆಂದು ಕುಮಾರಸ್ವಾಮಿ ಹೇಳಿದ್ದಾರೆ.
ನೀಟ್ ಅಕ್ರಮದ ಬಗ್ಗೆ 1 ದಿನ ಪ್ರತ್ಯೇಕ ಚರ್ಚೆಗೆ ನಾವು ಅವಕಾಶ ಕೇಳುತ್ತಿದ್ದೇವೆ. ಇದು ಅತ್ಯಂತ ಪ್ರಮುಖ ವಿಷಯ. 2 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗಿದೆ. 70 ಕಡೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಮಗೆ ಸಂತಸವಾಗುತ್ತದೆ' ಎಂದು ರಾಹುಲ್ ಮನವಿ ಮಾಡಿಕೊಂಡಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು NDA ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ.
Andhra Assembly Elections 2024: ವಿಧಾನಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ತಮ್ಮ ಪಕ್ಷವನ್ನು ಮರೆಯಬಾರದು ಅಂತಾ ಶುಕ್ರವಾರ ಹೈದರಾಬಾದ್ನಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದರು. ನಾವು ಸಂಸತ್ತಿನಲ್ಲಿ ಇನ್ನೂ 15 ಸಂಸದರನ್ನು ಹೊಂದಿದ್ದೇವೆ ಎಂದು ಅವರು ಇದೇ ವೇಳೆ ನೆನಪಿಸಿದ್ದರು.
ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ವಿವಿಧ ಖಾತೆಗಳನ್ನು ನೀಡಲಾಗಿದೆ.. ಪ್ರಧಾನಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಸಚಿವರಿದ್ದಾರೆ.
Lok Sabha Election 2024: ಕೆಲವು ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಬಂದಿದ್ದನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆಗೆ ಸ್ಥಳೀಯ ಕಾರಣಗಳಿರುತ್ತವೆ. ಅವುಗಳ ವಿಶ್ಲೇಷಣೆ ಮಾಡುತ್ತೇವೆ. ಕೊರತೆ ಸರಿಪಡಿಸಿಕೊಂಡು ಮೋದಿಯವರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Bihar Political Crisis: ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ́ಮಹಾಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ, ಹೀಗಾಗಿ ನಾನು ಈ ನಿರ್ಧಾರ ಮಾಡಿದ್ದೇನೆ ಅಂತಾ ಹೇಳಿದ್ದಾರೆ. 2022ರ ಆಗಸ್ಟ್ನಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ NDA ಜೊತೆಗಿನ ಮೈತ್ರಿ ಮುರಿದು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಿದ್ದರು. ಇದೀಗ 18 ತಿಂಗಳ ಬಳಿಕ ಮತ್ತೆ ಅವರು NDAಗೆ ಮರಳಿದ್ದಾರೆ.
COVID-19 ರ ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿಲ್ಲ ಎನ್ನುವ ಕೇಂದ್ರದ ಉತ್ತರದ ಬಗ್ಗೆ ಕಿಡಿ ಕಾರಿರುವ ರಾಹುಲ್ ಗಾಂಧಿ ‘ಸಬ್ ಯಾದ್ ರಖಾ ಜಯೇಗಾ’ (ಎಲ್ಲವನ್ನೂ ನೆನಪಿಸಿಕೊಳ್ಳಲಾಗುವುದು) ಎಂದು ಹೇಳಿದ್ದಾರೆ.
ಈ ಕುರಿತಾಗಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದ ನಂತರ ಪ್ರತಿಪಕ್ಷದಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಕೇಂದ್ರ ಬಜೆಟ್ 2018 ಯಾವುದೇ ಹೊಂದಾಣಿಕೆಯ ಬಜೆಟ್ಗಳಿಲ್ಲದೆ ಕೇವಲ ಫ್ಯಾನ್ಸಿ ಯೋಜನೆಗಳನ್ನು ಒಳಗೊಂಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.