ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲ ಇಂದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಸಭೆಯನ್ನು ಕರೆದು ʼವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು. ಅದಕ್ಕಾಗಿ ತಮ್ಮ ಮುನ್ನೋಟವನ್ನು ಸಭೆಯಲ್ಲಿ ಪ್ರಸುತ್ತಪಡಿಸಿದರು. ಕರ್ನಾಟಕವೂ ಸೇರಿ ಎಲ್ಲಾ ರಾಜ್ಯಗಳು ಭಾಗವಹಿಸಬೇಕಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನ ಪಟ್ಟಿದ್ದಾರೆ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಬಯಲಿಗೆ ಎಳೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದರು.
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು.
ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ಲೂಟಿ ಹೊಡೆದು ಲೋಕಸಭಾ ಚುನಾವಣೆಯಲ್ಲಿ ಬಳಸಿಕೊಂಡ ಮಾಹಿತಿ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇವೆ. 14 ತಿಂಗಳ ಅವಧಿಯಲ್ಲಿ ಈ ಸರಕಾರ ಮೊದಲ ಬಾರಿಗೆ ಗಂಡಾಂತರಕ್ಕೆ ಸಿಲುಕಿ ಹಾಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಬಿ.ವೈ. ವಿಜಯೇಂದ್ರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.