ಬೆಂಗಳೂರು : ರಾಜ್ಯದಲ್ಲಿ ಕೊರೆಯುವ ಚಳಿಗೆ ಕರಾವಳಿ ಸೇರಿ ಉತ್ತರ ಕರ್ನಾಟಕ ತತ್ತರಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶವು ದಾಖಲೆ ಪ್ರಮಾಣಕ್ಕಿಳಿದಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ತುಮಕೂರು, ಚಿತ್ರದುರ್ಗ ಸೇರಿ ಹಲವು ಭಾಗದಲ್ಲಿ ಚಳಿ ಹೆಚ್ಚಾಗಿದೆ.
ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2,721 ದಿನಗಳ ನಿರಂತರವಾಗಿ ನಡೆದ ಮಹದಾಯಿ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಮಹದಾಯಿ ಹೋರಾಟಗಾರರು ಫುಲ್ ಖುಷ್ ಆಗಿದ್ದಾರೆ. ರಾಜ್ಯದ ರೈತರ ಪರವಾಗಿ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಧಾರವಾಡ, ಹುಬ್ಬಳ್ಳಿ, ಗದಗದಲ್ಲಿ ಅನ್ನದಾತರು ಸಂಭ್ರಮಾಚರಣೆ ಮಾಡ್ತಿದ್ದಾರೆ.
1985ರಲ್ಲಿ ರಾಜಕೀಯಕ್ಕೆ ಎಂಟ್ರಿ ನೀಡಿದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ.
ಒಂಬತ್ತು ಬಾರಿ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು.
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಎತ್ತಿರುವ ಸಚಿವ ಉಮೇಶ್ ಕತ್ತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ 'ಪದೇ ಪದೇ ಪ್ರತ್ಯೇಕ ರಾಜ್ಯದ ಮಾತಾನಾಡುವ ಸಚಿವ ಉಮೇಶ್ ಕತ್ತಿಯವರು ನಾಡದ್ರೋಹಿಯಲ್ಲದೆ ಮತ್ತೇನು.? ಉಮೇಶ್ ಕತ್ತಿಯವರಿಗೆ ಕರ್ನಾಟಕದಲ್ಲಿ ಇರಲು ಸಂಕಟವಾದರೆ ರಾಜ್ಯ ಬಿಟ್ಟು ತೊಲಗಲಿ" ಎಂದು ಹೇಳಿದ್ದಾರೆ.
2021-22ರ ಆರ್ಥಿಕ ವರ್ಷದಲ್ಲಿ ಸಮಗ್ರ ಉತ್ತರ ಕರ್ನಾಟಕ 12 ಜಿಲ್ಲೆಗಳನ್ನೊಳಗೊಂಡಿರುವ ಬೆಳಗಾವಿ ವಿಭಾಗದಲ್ಲಿ ರೂ.10172 ಕೋಟಿಗಳ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದಾಖಲೆಯ ಸಂಗ್ರಹವಾಗಿದೆ ಎಂದು ಬೆಳಗಾವಿಯ ಕೇಂದ್ರ ಜಿಎಸ್ಟಿ ಹಾಗೂ ಅಬಕಾರಿ ಸುಂಕ ವಿಭಾಗದ ಉಪ ಆಯುಕ್ತ ಅಜಿಂಕ್ಯಾ ಹರಿ ಕಾಟ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿದ ಉದ್ದೇಶವೇ ಉತ್ತರ ಕರ್ನಾಟಕ ಭಾಗದ ಜನರಿಗೆ ನ್ಯಾಯ ಒದಗಿಸುವುದು.. ಬಿಜೆಪಿ ಸರ್ಕಾರದ ಅಲಕ್ಷ್ಯ ಧೋರಣೆಯಿಂದಾಗಿ ಈ ಉದ್ದೇಶದ ಈಡೇರಿಕೆ ಆಗುತ್ತಿಲ್ಲ. ಇದು ಉತ್ತರ ಕರ್ನಾಟಕ ವಿರೋಧಿ ಸರ್ಕಾರ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.