ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಮತ್ತು ಗುಜರಾತ್, ರಾಜಸ್ಥಾನ, ಛತ್ತೀಸ್ಗಡ್, ಹರಿಯಾಣ ಮತ್ತು ಪಂಜಾಬ್ನ 13 ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂ, ಸಿಖ್, ಜೈನ ಮತ್ತು ಬೌದ್ಧರಂತಹ ಮುಸ್ಲಿಮೇತರರನ್ನು ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಕೇಂದ್ರವು ಶುಕ್ರವಾರದಂದು ಆಹ್ವಾನಿಸಿದೆ.
ಇಂದು ದೆಹಲಿ ವಿಧಾನಸಭೆ ಎನ್ಪಿಆರ್ ಮತ್ತು ಎನ್ಆರ್ಸಿವಿರುದ್ಧ ನಿರ್ಣಯವನ್ನು ಅಂಗೀಕರಿಸಿದ್ದು, 70 ಜನ ಶಾಸಕರಲ್ಲಿ 61 ಮಂದಿ ತಮ್ಮ ಜನನ ಪ್ರಮಾಣಪತ್ರಗಳನ್ನು ಇನ್ನೂ ಹೊಂದಿದ್ದೀರಾ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಳಿದಾಗ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ ವರ್ಷ ಡಿಸೆಂಬರ್ 15ರಿಂದ ಪ್ರತಿಭಟನಾಕಾರರು ದೆಹಲಿಯ ಶಾಹೀನ್ ಬಾಗ್ ನಲ್ಲಿ ಧರಣಿ ನಡೆಸುತ್ತಿದ್ದು, ಇದೀಗ 83 ದಿನಗಳು ಪೂರ್ಣಗೊಂಡಿವೆ.
ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಕುರಿತು ಬಿಹಾರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ಬಿಹಾರ ವಿಧಾನಸಭೆಯಲ್ಲಿ ಮಂಗಳವಾರ (ಫೆಬ್ರವರಿ 25) ಎನ್ಆರ್ಸಿಯನ್ನು ಜಾರಿಗೆ ತರಬಾರದು ಎಂಬ ನಿರ್ಣಯವನ್ನು ಅಂಗೀಕರಿಸಿದೆ.
ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಸೂಕ್ಷ್ಮವಲ್ಲದ ಮತ್ತು ದೂರದೃಷ್ಟಿಹೀನ ನಾಯಕರನ್ನು ಆಯ್ಕೆ ಮಾಡುವ ಮಾಡಿದ್ದಕ್ಕೆ ಜನರು ಪಾವತಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಎಗೆ ತಿದ್ದುಪಡಿಯನ್ನು ಕೂಡಲೇ ಕೈಬಿಡಬೇಕು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಧ್ವನಿಯನ್ನು ಸರ್ಕಾರ ಆಲಿಸಬೇಕು ಎಂದು ಅವರು ಹೇಳಿದರು.
ದೆಹಲಿಯ ಒಂದು ಭಾಗದಲ್ಲಿ 24 ಗಂಟೆಗಳಿಗೂ ಹೆಚ್ಚು ಕಾಲ ಪೌರತ್ವ ತಿದ್ದುಪಡಿ ಕಾನೂನಿನ ಪ್ರತಿಭಟನೆಯ ವಿಚಾರವಾಗಿ ಪರ-ವಿರೋಧದ ಗುಂಪುಗಳ ನಡುವಿನ ಘರ್ಷಣೆಯಿಂದಾಗಿ ಇದರಲ್ಲಿ ಪೊಲೀಸ್ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದರು ಮತ್ತು ಅಸ್ಸಾಂನಲ್ಲಿ ಮಾತ್ರ ಎನ್ಆರ್ಸಿ ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ಕೆಲವೇ ದಿನಗಳ ಮೊದಲು, ಯುಎಸ್ ಸಂಸ್ಥೆ ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಕಳವಳ ವ್ಯಕ್ತಪಡಿಸಿದೆ, ಪ್ರಸ್ತಾವಿತ ಕಾಯ್ದೆಯು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಕಾನೂನಿನ ಒಂದು ಭಾಗವಾಗಿದೆ. ಈ ನಡೆ ಧಾರ್ಮಿಕ ಪರೀಕ್ಷೆಯನ್ನು ರಚಿಸುವ ಪ್ರಯತ್ನ ಮತ್ತು ಭಾರತೀಯ ಮುಸ್ಲಿಮರ ಹಕ್ಕು ನಿರಾಕರಣೆಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟಿದೆ.
ವಿಡಿಯೋವನ್ನು ಹಂಚಿಕೊಂಡಿರುವ ಅನುಪಮ್ ಖೇರ್ ಸ್ವತಂತ್ರ ಭಾರತದಲ್ಲಿ ನಮಗೆ ಯಾವುದೇ ಒಂದು ಸಂಗತಿಯಿಂದ ಸ್ವಾತಂತ್ರ್ಯ ಬೇಕಾದರೆ ಅದಕ್ಕಾಗಿ ಕೆಲಸ ಮಾಡಬೇಕು ಹಾಗೂ ದೇಶದಲ್ಲಿನ ವಿವಿಧ ಕ್ಷೇತ್ರಗಳಲ್ಲಿನ ಕೋಟ್ಯಂತರ ಯುವಕರು ಇದಕ್ಕಾಗಿ ಶ್ರಮಿಸುತ್ತಿದ್ದು, ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಬಯಸುತ್ತಿದ್ದಾರೆ. ಘೋಷಣೆಗಳನ್ನು ಕೂಗುವುದರ ಮೂಲಕ ಸ್ವಾಂತತ್ರ್ಯತೆ ಪಡೆಯಲು ಬಯಸುವವರು ಘೋಷಣೆಗಳನ್ನು ಹೊರತುಪಡಿಸಿ ದೇಶದ ಪ್ರತಿ ಅವರು ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
ಒಂದು ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಮುಸ್ಲಿಂಮರಿಗೆ ಯಾವುದೇ ರೀತಿಯ ತೊಂದರೆ ಉಂಟು ಮಾಡಿದರೆ, ಅವರನ್ನು ಬೆಂಬಲಕ್ಕೆ ನಿಲ್ಲುವ ಮೊದಲ ವ್ಯಕ್ತಿ ನಾನಾಗಲಿದ್ದೇನೆ ಎಂದು ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲ NPR ಕೂಡ ದೇಶದ ಹಿತದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.
ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಬುಧವಾರ, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಕರ ಜನನ ಪ್ರಮಾಣಪತ್ರವನ್ನು ತೋರಿಸಿದರೆ ಜನರು ಕೂಡ ಸಂಬಂಧಿತ ದಾಖಲೆಗಳನ್ನು ನೀಡುತ್ತಾರೆ ಎಂದು ಹೇಳಿದರು.
SC ಮತ್ತು ST ಪಂಗಡಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಮುಂದಿನ 10 ವರ್ಷಗಳಿಗೆ ಹೆಚ್ಚಿಸಲು ಈ ವಿಶೇಷ ಅಧಿವೇಶನ ಕರೆಯಲಾಗಿದೆ. ಬಿಹಾರ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ NRCಗೆ ಸಂಬಂಧಿಸಿದಂತೆ ಗಂಭೀರ ಹೇಳಿಕೆ ನೀಡಿದ್ದಾರೆ.
ನಟಿ ಜುಹಿ ಚಾವ್ಲಾ ಅವರು ಸರ್ಕಾರವನ್ನು ನಿರಂತರವಾಗಿ ಟೀಕಿಸುವ ಬದಲು, ಒಬ್ಬರ ಸ್ವಂತ ನಡವಳಿಕೆಯನ್ನು ಪ್ರತಿಬಿಂಬಿಸಬೇಕು ಎಂದು ಹೇಳಿದರು. "ಮುಕ್ತ ಕಾಶ್ಮೀರ (ನಿರೂಪಣೆ), ಭಾರತ ವಿರೋಧಿ ಘೋಷಣೆಗಳು, ಸುಳ್ಳು ಪ್ರಚಾರ ಮತ್ತು ತಪ್ಪು ಕಲ್ಪನೆಯನ್ನು ತೆರವುಗೊಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.