ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ,ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು.
Phone tapping: ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
Samantha-Nag Chaitanya Divorce Real Reason: ಟಾಲಿವುಡ್ ಸ್ಟಾರ್ ಜೋಡಿ ನಾಗ ಚೈತನ್ಯ-ಸಮಂತಾ ವಿಚ್ಛೇದನ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಇತ್ತೀಚಿಗೆ ರಾಜ್ಯವನ್ನೇ ನಡುಗಿಸುವ ಫೋನ್ ಕದ್ದಾಲಿಕೆ ವಿಚಾರದಲ್ಲಿ ಇವರ ಹೆಸರುಗಳು ಹರಿದಾಡುತ್ತಿವೆ..
Priyanka Gandhi Vadra: ಸರ್ಕಾರದಿಂದ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಫೋನ್ ಟ್ಯಾಪಿಂಗ್ ಬಿಡಿ, ನನ್ನ ಮಕ್ಕಳ ಇನ್ಸ್ಟಾಗ್ರಾಮ್ ಕೂಡ ಹ್ಯಾಕ್ ಮಾಡಲಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.
'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ನಾನು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ರಾಜಕೀಯದಲ್ಲಿ ಈಗ ಫೋನ್ ಕದ್ದಾಲಿಕೆ ವಿಚಾರ ಈಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.ಬಿಜೆಪಿ ನಾಯಕರು ತಮ್ಮ ಫೋನ್ ಕದ್ದಾಲಿಕೆ ವಿಚಾರವಾಗಿ ಈಗ ಮೀಡಿಯಾ ಮುಂದೆ ಹಂಚಿಕೊಂಡಿದ್ದಾರೆ.ಫೋನ್ ಕದ್ದಾಲಿಕೆ ವಿಚಾರವಾಗಿ ಆರೋಪ ಮಾಡಿರುವ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಆರ್.ಅಶೋಕ ಈ ಸರ್ಕಾರವು ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರು ಸತ್ಯ ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.