ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.
ಜಾಲಹಳ್ಳಿಯ ಪೊಲೀಸ್ ಠಾಣೆಯ ಹಿಂಭಾಗದ ಶ್ರೀಗಣೇಶ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಪ್ಲಾಸ್ಟಿಕ್ ಕೋಟೆಡ್ ಪೇಪರ್ ಪ್ಲೇಟ್ ತಯಾರಿಕಾ ಘಟಕಕ್ಕೆ ಭೇಟಿ ನೀಡಲು ಹೋದ ಸಮಯದಲ್ಲಿ ಪಾಲಿಕೆಯ ತಂಡ ಬರುತ್ತಿರುವುದನ್ನು ಮನಗಂಡ ಪ್ಲಾಸ್ಟಿಕ್ ಘಟಕವು ಒಳಗಿನಿಂದ ಬೀಗ ಹಾಕಿಕೊಂಡಿದೆ.
ಬಿಬಿಎಂಪಿ ಘನ ವಿಭಾಗದ ವಿಶೇಷ ಆಯುಕ್ತರಿಂದ ಆದೇಶ ಹೊರಡಿಸಲಾಗಿದ್ದು, ಕಾರ್ಯಚರಣೆ ವೇಳೆ ಸಿಬ್ಬಂದಿಗೆ ಬೆದರಿಕೆ ಮತ್ತು ಕರ್ತವ್ಯಕ್ಕೆ ಅಡ್ಡಿ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಡಕ್ ವಾರ್ನಿಂಗ್ ನೀಡಲಾಗಿದೆ.
ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 810 ಕೆ.ಜಿ.ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿದೆ.
ದೇಶದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಶಾಂತ್ ಎ ತಿಮ್ಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Smriti Irani : ರಾಹುಲ್ ಗಾಂಧಿಗೆ ವಾರ್ನಿಂಗ್ ನೀಡಿದ ಸಚಿವೆ ಸ್ಮೃತಿ ಇರಾನಿ..!
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾರುಕಟ್ಟೆಯಲ್ಲಿ ನಿರ್ದಾಕ್ಷಿಣ್ಯವಾಗಿ ಬಳಸುವ ಪ್ಲಾಸ್ಟಿಕ್ ಅನ್ನು ಹಾನಿಕಾರಕವೆಂದು ಪರಿಗಣಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) 50 ಮೈಕ್ರಾನ್ಗಳಿಗಿಂತ ತೆಳ್ಳಗಿನ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿತ್ತು. ಅಂಗಡಿಗಳಲ್ಲಿ ಇಂತಹ ಪ್ಲಾಸ್ಟಿಕ್ಗಳ ಮಾರಾಟ, ಸಂಗ್ರಹ ಮತ್ತು ಬಳಕೆಯನ್ನು ನಿಷೇಧಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.