ನಿರ್ಭಯಾ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಮುಖೇಶ್ ಸಿಂಗ್ ಮಂಗಳವಾರ (ಜನವರಿ 14) ಸುಪ್ರೀಂ ಕೋರ್ಟ್ ಮರಣದಂಡನೆ ವಿರುದ್ಧದ ಕ್ಯುರೆಟಿವ್ ಅರ್ಜಿಯನ್ನು ತಿರಸ್ಕರಿಸಿದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಮುಂದೆ ದಯಾ ಅರ್ಜಿಯನ್ನು ಸಲ್ಲಿಸಿದ್ದಾರೆ.
ಪಾಕಿಸ್ತಾನದ ವಾಯುಪ್ರದೇಶದ ಮೂಲಕ ಐಸ್ಲೆಂಡ್ ತೆರಳಲು ರಾಷ್ಟ್ರಪತಿ ಕೊವಿಂದ್ ಅವರಿಗೆ ಅನುಮತಿ ನೀಡಬೇಕು ಎಂದು ಕೋರಿದ್ದ ಭಾರತದ ಮನವಿಯನ್ನು ತಿರಸ್ಕರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಹೇಳಿದ್ದಾರೆ. ಈ ನಿರ್ಧಾರಕ್ಕೆ ಭಾರತದ ಇತ್ತೀಚಿಗಿನ ನಡವಳಿಕೆ ಕಾರಣ ಎಂದು ಖುರೇಶಿ ತಿಳಿಸಿದ್ದಾರೆ.
73 ನೇ ದೇಶದ ಸ್ವಾತ್ರಂತ್ರ ದಿನಾಚರಣೆ ಪ್ರಯುಕ್ತ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೊವಿಂದ್ 'ಈಗ ನಾವೆಲ್ಲರೂ ಒಟ್ಟಾಗಿ ಭಾರತದ ಇನ್ನು ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ ಎಂದು ಹೇಳಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರದಂದು ಕೇಂದ್ರ ಸಭಾಂಗಣದಲ್ಲಿ ಸಂಸತ್ತಿನ ಉಭಯ ಸದನಗಳಾದ ರಾಜ್ಯಸಭೆ (ಮೇಲ್ಮನೆ) ಮತ್ತು ಲೋಕಸಭೆ (ಕೆಳಮನೆ) ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಸಮಗ್ರ ಬೆಳವಣಿಗೆ, ಸಶಸ್ತ್ರ ಪಡೆಗಳ ಆಧುನೀಕರಣ ಮತ್ತು ಲಿಂಗ ಸಮಾನತೆ ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ ನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೊವಿಂದ್ " ಸರ್ಕಾರ ನವ ಭಾರತ ನಿರ್ಮಾಣಕ್ಕಾಗಿ ಬದ್ದವಾಗಿದೆ ಜನರಿಗೆ ಹೊಸ ಆಶಯವನ್ನು ನೀಡುವಲ್ಲಿ ಕಾರ್ಯಪ್ರವೃತ್ತರಾಗಿದೆ" ಎಂದು ತಿಳಿಸಿದರು.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಅವರ ಪತ್ನಿ ಪ್ರಯಾಗ್ ರಾಜ ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗವರ್ನರ್ ರಾಮ್ ನಾಯ್ಕ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.