ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಮಾಜಕ್ಕೆ ಮಾತು ತಪ್ಪಿದ್ದರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ. ನಾಳೆ ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸೋದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ. 26ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ. ಸಿದ್ದರಾಮಯ್ಯ ಪರ ಟ್ರೆಂಡ್ ಸೆಟ್ಗೆ ವೇದಿಕೆ. ಮೊಟ್ಟೆ ಎಸೆತ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಆಕ್ರೋಶ. ಸಿದ್ದರಾಮಯ್ಯ ಪರ ಕಾಂಗ್ರೆಸ್ ನಾಯಕರ ಬ್ಯಾಟಿಂಗ್. ಸಿದ್ದು ರಕ್ಷಣೆ ವಿಚಾರದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ. 26ಕ್ಕೆ ಮಡಿಕೇರಿ SP ಕಚೇರಿಗೆ ಮುತ್ತಿಗೆ ಹಾಕಲು ʼಕೈʼ ಭರ್ಜರಿ ಸಿದ್ಧತೆ.
ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತಲೆದೋರೋ ಸಾಧ್ಯತೆ ಇದೆ. ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಗುತ್ತಿಗೆ ಪೌರಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು ಸೇರಿ ಬೃಹತ್ ಹೋರಾಟ ಮಾಡ್ತಿದ್ದಾರೆ. ಹೀಗಾಗಿ ಬೆಂಗಳೂರು ಮತ್ತೆ ಗಬ್ಬೆದ್ದು ನಾರೋ ಸಾಧ್ಯತೆ ಇದೆ.
ಕಾಂಗ್ರೆಸ್ನವರು ಭ್ರಷ್ಟಾಚಾರ ನಡೆಸಿರುವವರ ಪರ ಹೋರಾಟ ಮಾಡುತ್ತಿದ್ದಾರೆ. ಈಗ ಅವರು ರಾಜಭವನ ಚಲೋ ನಡೆಸುತ್ತಿದ್ದಾರೆ. ಈ ರೀತಿ ಮಾಡಿದ್ರೆ ಜನ ಅವರನ್ನ ಮನೆಗೆ ಚಲೋ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ದಾರೆ
ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖಾ ಚಾಲನೆ ಶಿವಮೊಗ್ಗದ ಕುಪ್ಪಳಿಯಲ್ಲಿ ಪಾದಯಾತ್ರೆಗೆ ಚಳವಳಿಗೆ ಚಾಲನೆ ರೋಹಿತ್ ಚಕ್ರತೀರ್ಥ ವಿರುದ್ಧ ಪ್ರತಿಭಟಿಸಿ ಆಕ್ರೋಶ ರೋಹಿತ್ ಚಕ್ರತೀರ್ಥ, ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ
ರಾಜ್ಯದ ಬಿಜೆಪಿ ಸರ್ಕಾರದ ಇದೀಗ ಶಿಕ್ಷಣದ ಪಠ್ಯದಲ್ಲಿ ಕೇಸರಿಕರಣ ಮಾಡಲು ಮುಂದಾಗಿದೆ ಎಂದು ಆರೋಪಿಸಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದ್ರು. ರೋಹಿತ್ ಚಕ್ರತೀರ್ಥರ ಪಠ್ಯ ಪರಿಷ್ಕರಣಾ ಸಮಿತಿ ಅಳವಡಿಸಿದ್ದ ಪಠ್ಯವನ್ನು ವಿರೋಧಿಸಿ ಅವರ ಪರಿಷ್ಕರಿಸಿರೋ ಪಠ್ಯವನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು. ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಹತ್ತನೇ ತರಗತಿಯ ಪುಸ್ತಕದಲ್ಲಿರುವ ಕೇಶವ ಬಲಿರಾಮ್ ಹೆಡ್ಗೇವಾರ್ ರ ಆದ ರ್ಶ ಪುರಷ ಪಠ್ಯ ಸುಟ್ಟು ಹಾಕಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ನ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿಯು ಕುಸಿದು ಬೀಳಲು ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆಯೇ ಕಾರಣ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯು ಪ್ರತಿಭಟನೆ ನಡೆಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.