ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕೂಡ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇನ್ನೆರಡು ದಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಮೂರು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ .. ರೆಡ್ ಅಲರ್ಟ್ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ .. ಮುಂದಿನ 5 ದಿನವೂ ಭಾರೀ ಮಳೆ . ನಾಳೆ ಆರೆಂಜ್ ಅಲರ್ಟ್, ಮುಂದಿನ ಮೂರು ದಿನ ಎಲ್ಲೋ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ಕೆಲ ಜಿಲ್ಲೆಯಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬಿಸಮುದ್ರದಲ್ಲಿ ಮಲ್ಮೈ ಸುಳಿಗಾಳಿಯಿಂದಾಗಿ ಮುಂದಿನ 3
ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿ ಮುಂದುವರೆದಿದೆ. ಇದಲ್ಲದೇ ಇನ್ನೂ ಮುಂಗಾರು ಆಗಮಿಸದ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದೆ.
ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ ಎಂದಿದೆ.
ಮುಂದಿನ ಕೆಲವು ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಭಾರೀ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ.
ಗದಗದಲ್ಲಿ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ.. ಮಳೆಯಿಂದ ಗದಗ ಗ್ರೇನ್ ಮಾರ್ಕೆಟ್ ಜಲಾವೃತವಾಗಿದೆ. ನೀರಿನಿಂದಾಗಿ ವ್ಯಾಪಾರಿಗಳು ಪರದಾಡುವಂತಾಗಿದೆ. ಮಳೆ ನೀರು ಸರಾಗವಾಗಿ ಹೋಗಲು ಅನುಕೂಲ ಇಲ್ಲದ ಹಿನ್ನೆಲೆ ಅವಾಂತರವಾಗಿದೆ. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ..
ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಿಥುನ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಹಲವೆಡೆ ಧಾರಾಕಾರ ಮಳೆ ..ಗುಡುಗು, ಸಿಡಿಲಿನೊಂದಿಗೆ ಮಳೆ ಆರ್ಭಟ.. ಜನಜೀವನ ಅಸ್ತವ್ಯಸ್ತ.. ಮೆಜೆಸ್ಟಿಕ್, ಚಾಮರಾಜಪೇಟೆ, ಯಶವಂತಪುರ, ಹೆಬ್ಬಾಳ. ಇಂದಿರಾ ನಗರ, ಜಯನಗರ ಸೇರಿಂದಂತೆ ಹಲವೆಡೆ ಮಳೆ ..
ಚಿಕ್ಕೋಡಿಯಲ್ಲಿ ಗಾಳಿಮಳೆಗೆ ಹಾರಿ ಹೋದ ಶಾಲೆಯ ಮೇಲ್ಚಾವಣಿ
ಚಿಕ್ಕೋಡಿ ಉಪವಿಭಾಗದಲ್ಲಿ ತಡರಾತ್ರಿ ಮಳೆರಾಯನ ಅವಾಂತರ
ಅಥಣಿ ತಾಲೂಕಿನ ಅನಂತಪುರದ ಶಾಲೆ ಮೇಲ್ಚಾವಣಿ ಗಾಳಿಪಾಲು
ಶಾಲೆಯ ಮೇಲ್ಚಾವಣಿ ಬಿದ್ದು ರಸ್ತೆಯಲ್ಲಿದ್ದ ನಾಲ್ಕು ಬೈಕ್ಗಳು ಜಖಂ
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಈವರೆಗೂ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.. ನಿರಂತರ ಮಳೆಯಿಂದ ಕಾಫಿ ಹಣ್ಣು ಉದುರಲು ಆರಂಭಿಸಿದ್ದು, ಬೆಳೆಗಾರರು ಚಿಂತೆಗೊಳಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಿಂದಗೆರೆ ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.. ಈ ನಡುವೆ ಭಾರಿ ಮಳೆಗೆ ಹತ್ತಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಸಹ ಕಂಡು ಬಂದಿದೆ.
ಇವತ್ತು ಬೆಳಗ್ಗೆ ಆಗುಂಬೆ ಘಾಟಯಲ್ಲಿ, ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಬೆಳಗಿನ ಜಾವವೇ ಮರ ಬಿದ್ದಿದ್ದರಿಂದ, ಬೆಳಗ್ಗೆ ಆರುಗಂಟೆ ಸುಮಾರಿಗೇನೆ, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸಣ್ಣಗೆ ಮಳೆಯು ಬರುತ್ತಿತ್ತು. ಮರಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು.ಈ ನಡುವೆ ಕೆಲವು ಸಣ್ಣ ವಾಹನಗಳು, ಮರದ ಅಡಿಯಲ್ಲಿ ಇದ್ದ ಸ್ವಲ್ಪ ಜಾಗದಲ್ಲಿ ತಮ್ಮ ವಾಹನಗಳನ್ನು ಮುಂದಕ್ಕೆ ತೆಗೆದುಕೊಂಡು ಹೋದರು. ಇದು ಅಚ್ಚರಿ ಮೂಡಿಸ್ತಿತ್ತಾದರೂ, ಅಲ್ಲಿದ್ದವರು ಯಾವುದೇ ಅಪಾಯ ಆಗದ ಭರವಸೆ ನೀಡಿ, ವಾಹನಗಳನ್ನ ಮುಂದಕ್ಕೆ ಸಾಗಿಸುತ್ತಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.