Rajiv Gandhi Khel Ratna Award - ಖೇಲ್ ರತ್ನ (Rajiv Gandhi Khel Ratna Award) ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಜಿ (Major Dhyan Chand) ಅವರಿಗೆ ಅರ್ಪಿಸಬೇಕು ಎಂದು ಅನೇಕ ದೇಶವಾಸಿಗಳು ಒತ್ತಾಯಿಸಿದ್ದಾರೆ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ. ಜನರ ಭಾವನೆಗಳನ್ನು ಪರಿಗಣಿಸಿ, ಇದೀಗ ಅದನ್ನು ಇದನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ (Major Dhyan Chand Khel Ratna Award) ಎಂದು ಗುರುತಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.
ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಒಲಿಂಪಿಕ್ ಬೌಂಡ್ ಶಟ್ಲರ್ ಬಿ ಸಾಯಿ ಪ್ರಣೀತ್ ಮತ್ತು ಕಿಡಂಬಿ ಶ್ರೀಕಾಂತ್ ಆಯ್ಕೆಯಾಗಿದ್ದಾರೆ.
ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸದಿದ್ದರೆ ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಒಲಿಂಪಿಕ್ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ.
ಭಾರತದ ಸೀಮಿತ ಓವರ್ಗಳ ಉಪನಾಯಕ ಮತ್ತು ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದನ್ನು ಕ್ರೀಡಾ ಕ್ಷೇತ್ರದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ನೀಡಲಾಗುತ್ತದೆ
ಐಎಎನ್ಎಸ್ ಸುದ್ದಿ ಸಂಸ್ಥೆಗೆ ತಿಳಿಸಿರುವ ಮೂಲಗಳ ಪ್ರಕಾರ ಭಜರಂಗ್ ಪುನಿಯಾ ಅವರಿಗೆ ಕುಸ್ತಿ ಕ್ಷೇತ್ರದಲ್ಲಿನ ಸತತ ಪ್ರದರ್ಶನದಿಂದಾಗಿ ಅವರಿಗೆ ಪ್ರಶಸ್ತಿ ನೀಡಲಾಗುವುದು ಎನ್ನಲಾಗಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟಿಂಗ್ ನಲ್ಲಿ ವಿಶ್ವ ಚಾಂಪಿಯನ್ ಆಗಿರುವ ಮಿರಾಬಾಯ್ ಚಾನು ಅವರನ್ನು ಸೋಮವಾರ ಈ ವರ್ಷದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.