ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.
ಎಐಸಿಸಿಯಿಂದ ರಾಜ್ಯಸಭೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ
4 ರಾಜ್ಯಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್
ರಾಜಸ್ಥಾನ, ಬಿಹಾರ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ
ರಾಜಸ್ಥಾನದಿಂದ ಸೋನಿಯಾ ಗಾಂಧಿ ಅಭ್ಯರ್ಥಿಯಾಗಿ ಕಣಕ್ಕೆ
ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್ ಅಭ್ಯರ್ಥಿ
ಹಿಮಾಚಲ ಪ್ರದೇಶ ಅಭಿಷೇಕ್ ಮನು ಸಿಂಘ್ವಿ ಅಭ್ಯರ್ಥಿ
ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂಡೋರೆ ಅಭ್ಯರ್ಥಿ
ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ಇನ್ನೂ ಸಸ್ಪೆನ್ಸ್ ಸಸ್ಪೆನ್ಸ್
ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್ ನೀಡಿ
ರಾಜ್ಯಸಭಾ-ಲೋಕಸಭಾ ಚುನಾವಣೆಗೆ ಟಿಕೆಟ್ಗಾಗಿ ಒತ್ತಾಯ
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಶಾಮನೂರು
ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಬೇಕು
ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
ಕೋಲಾರ ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶಾಸಕ ಶ್ರೀನಿವಾಸಗೌಡ ನಿವಾಸದ ಮುಂಭಾಗ ಜೆಡಿಎಸ್ ಎಂಎಲ್ ಸಿ ಗೋವಿಂದರಾಜು ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ಚೆಹ್ನೆ ಮೂಲಕ ಗೆದ್ದಿರುವ ಶ್ರೀನಿವಾಸಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕುವ ಮೂಲಕ ಅಡ್ಡಮತದಾನ ಮಾಡಿದ್ದಾರೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯು ತಾನು ಸ್ಪರ್ಧಿಸಿದ್ದ ಎಲ್ಲಾ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ನಾಲ್ಕು ಸ್ಥಾನಗಳಿಗಾಗಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇನ್ನೊಂದೆಡೆಗೆ ಗೆಲ್ಲಲು ಸೂಕ್ತ ನಂಬರ್ ಇಲ್ಲದಿದ್ದರೂ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್ ಪಕ್ಷವು ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.