ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
Karnataka Shakti scheme: ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ʼಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲವೆಂದು ಹೇಳುತ್ತಿದ್ದಾರೆʼ ಅಂತಾ ಹೇಳಿದ್ದಾರೆ.
Airavata Club Class 2.0 Bus: ಐರಾವತ 2.0 ಮಾದರಿಯ 20 ಬಸ್ಸುಗಳನ್ನು KSRTCಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. ಒಂದು ಬಸ್ಸಿನ ದರ 1.78 ಕೋಟಿ ರೂ. ಇದ್ದು, ನಿಗಮದಲ್ಲಿ ಒಟ್ಟು 443 ಬಸ್ಸುಗಳು ಐಷಾರಾಮಿ ಬಸ್ಸುಗಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದ ನಗರ ಸಾರಿಗೆಯ ನೂತನ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಬೆಳಿಗ್ಗೆ ಧಾರವಾಡ ಸಿಬಿಟಿ ಆವರಣದಲ್ಲಿ ಶಂಕು ಸ್ಥಾಪನೆ ನೆರವೇರಿಸಿ, ಭೂಮಿ ಪೂಜೆ ಮಾಡಿದರು.
Transport Department Recruitment: KSRTCಯಲ್ಲಿ 3,745 ಚಾಲನಾ ಸಿಬ್ಬಂದಿ, 726 ತಾಂತ್ರಿಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ. ಹೊಸದಾಗಿ 1,433 ಚಾಲನಾ ಸಿಬ್ಬಂದಿ, 2,738 ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಎಚ್ ಡಿ ಕೆ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವರ್ಗಾವಣೆ ದಂಧೆ ಆರೋಪವನ್ನು ತಳ್ಳಿ ಹಾಕಿದರು.
ಸಚಿವ MTB ನಾಗರಾಜ್ ಅವರು ಕೆ.ಆರ್ ಪುರ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಅವರ ಸಾವಿನ ಕುರಿತು, ' ಪೋಸ್ಟಿಂಗ್ ಗಾಗಿ 70-80 ಲಕ್ಷ ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ' ಎಂದು ಬಹಿರಂಗವಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Ramalingareddy: ಸಿಎಂ ಇರುವ ಕಾರ್ಯಕ್ರಮದಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂದು ಗೊತ್ತಾಗಲ್ಲವಾ? ಹೋಗರೋ, ಬನ್ರೋ ಎಂದು ಮಾತಾಡುತ್ತಾರೆ. ಒಬ್ಬ ಮಂತ್ರಿ ಆಡುವ ಮಾತಾ ಇದು? ಎಂದು ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಕಿಡಿಕಾರಿದ್ದಾರೆ.
ಬಿಜೆಪಿ ನಾಯಕರು ಹಾಗೂ ಹಿಂದುಳಿದ ವರ್ಗಗಳ ಘಟಕ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಬಗ್ಗೆ ವಿನಾಕಾರಣ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ.ಅಧಿಕಾರಕ್ಕೋಸ್ಕರ ಕೆಲವರು ಬಿಜೆಪಿಗೆ ಹೋಗಿದ್ದಾರೆ ಎಂದರೇ ಹೊರತು ಹೊಟ್ಟೆಪಾಡಿಗೆ ಹೋಗಿದ್ದಾರೆ ಎಂದು ಹೇಳಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.