Prime Minister Narendra Modi Republic Day Look: ಇಡೀ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ವರ್ಷ, ಈಜಿಪ್ಟ್ ಅಧ್ಯಕ್ಷ ಅಬಲ್ಡ್ ಫತಾಹ್ ಎಲ್-ಸಿಸಿ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬಸಂತ್ ಪಂಚಮಿ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡರು. ಪ್ರಧಾನ ಮಂತ್ರಿ ಧರಿಸಿದ ಈ ಪೇಟ ಪ್ರತೀ ವರ್ಷ ಬೇರೆ ಬೇರೆಯಾಗಿದ್ದು, ಇದಕ್ಕೆ ಅರ್ಥವೂ ಇದೆ.
Reliance Jio Bumper Offer: ಟೆಲಿಕಾಂ ಇತಿಹಾಸದಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ಇದೀಗ ಗಣರಾಜ್ಯೋತ್ಸವ ದಿನದಂದು ತನ್ನ ಬಳಕೆದಾರರಿಗೆ ಬಂಪರ್ ಉಡುಗೊರೆಯನ್ನು ನೀಡುತ್ತಿದೆ.
Republic Day Wishes 2023: ಭಾರತದ 74 ನೇ ಗಣರಾಜ್ಯ ದಿನವನ್ನು ಆಚರಿಸುತ್ತಿದೆ. ಭಾರತವು ತನ್ನ ಸಂಸ್ಕೃತಿ, ನಾಗರಿಕತೆ, ಪರಂಪರೆಗಳಿಂದಾಗಿ ವಿಶ್ವದ ಎಲ್ಲಾ ದೇಶಗಳಲ್ಲಿ ಮೊದಲ ಸ್ಥಾನವನ್ನು ಹೊಂದಿದೆ.
Republic Day 2023: ಜನವರಿ 26 ಗಣರಾಜ್ಯೋತ್ಸವ ದಿನ. ಈ ದಿನವನ್ನು ಭಾರತದಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಅದರಲ್ಲೂ ದೆಹಲಿಯ ಕೆಂಪುಕೋಟೆ ಪ್ರಮುಖ ಆಕರ್ಷಣೆ ಕೇಂದ್ರ ಬಿಂದು. ಭವ್ಯ ಮೆರವಣಿಗೆ ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, ಪೊಲೀಸ್ ಮತ್ತು ಅರೆಸೇನಾ ಪಡೆಯ ರಾಜಪಥ ನೋಡುಗರ ಮನಸ್ಸು ಗೆಲ್ಲುತ್ತದೆ.
ಮೈಸೂರು ರಾಜ್ಯದ ಕೆಸಿ ರೆಡ್ಡಿ, ಕೆಂಗಲ್ ಹನುಮಂತಯ್ಯ, ಟಿ ಸಿದ್ದಲಿಂಗಯ್ಯ, ಎಚ್ ಆರ್ ಗುರುವ ರೆಡ್ಡಿ, ಎಸ್ ವಿ ಕೃಷ್ಣಮೂರ್ತಿ ರಾವ್, ಎಚ್ ಸಿದ್ದವೀರಪ್ಪ, ಟಿ ಚನ್ನಯ್ಯ ಮತ್ತು ಎಸ್ ನಿಜಲಿಂಗಪ್ಪ ಅವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಸಂವಿಧಾನ ರಚನೆಯಲ್ಲಿ ಮತ್ವದ ಪಾತ್ರವಹಿಸಿದ್ದಾರೆ.
ಗಣರಾಜ್ಯೋತ್ಸದ ಹಿನ್ನೆಲೆ ಪ್ರತಿ ವರ್ಷದಂತೆ ನೀಡುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಪೊಲೀಸ್ ಶ್ಲಾಘನೀಯ ಸೇವಾ ಪದಕ ವಿಜೇತರ ಪಟ್ಟಿ ಬಿಡುಗಡೆಯಾಗಿದೆ. ಈ ಬಾರಿ ರಾಜ್ಯದ 20 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯದ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ರಾಷ್ಟ್ರಪತಿಯವರ ಸೇವಾ ಪದಕ ಹಾಗೂ 19 ಜನ ಅಧಿಕಾರಿ ಮತ್ತು ಸಿಬ್ಬಂದಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ಒಲಿದಿದೆ.
SpiceJet announces Republic Day sale:ಗಣರಾಜ್ಯೋತ್ಸವದ ಅಂಗವಾಗಿ ಸ್ಪೈಸ್ ಜೆಟ್ ವಿಶೇಷ ಆಫರ್ ಜಾರಿಗೆ ತಂದಿದೆ. ಈ ಆಫರ್ ಅಡಿಯಲ್ಲಿ ವಿಮಾನ ಟಿಕೆಟ್ ಅನ್ನು ಕೇವಲ 1126 ರೂಪಾಯಿಗೆ ಬುಕ್ ಮಾಡಬಹುದು.
Republic Day 2023: ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕಾಗಿ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು.
Parakram Diwas 2023: ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರ ದಮನಕಾರಿ ನೀತಿ ಹೆಚ್ಚಾಗುತ್ತಿದ್ದಂತೆ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯೇ ಸರಿ ಎಂಬ ಅಭಿಪ್ರಾಯ ಹೊಂದಿದರು. ಅವರು ಶಸ್ತ್ರ ಸಜ್ಜಿತ ಹೋರಾಟದಿಂದ ಮಾತ್ರವೇ ಭಾರತ ಬ್ರಿಟಿಷರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ದೃಢವಾಗಿ ನಂಬಿದ್ದರು.
Argentine Air Force-Army soldiers participate in Republic Day: 12 ಜನರ ಈ ಯುವ ಯೋಧರ ನಿಯೋಗ 1950ರ ಜನವರಿ 26ರಂದು ಭಾರತ ಸಂವಿಧಾನವನ್ನು ಅಂಗೀಕರಿಸಿದ ಸಂದರ್ಭವನ್ನು ಆಚರಿಸುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರತಿವರ್ಷವೂ, ಗಣರಾಜ್ಯೋತ್ಸವ ಸಮಾರಂಭವನ್ನು ಅಮೋಘವಾದ ಮಿಲಿಟರಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ.
ಪ್ರತಿವರ್ಷದಂತೆ ಈ ವರ್ಷವೂ ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ 74ನೇ ಗಣರಾಜ್ಯವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈಗಾಗಲೇ ಸಶಸ್ತ್ರ ಪಡೆಗಳು, ದೆಹಲಿ ಪೊಲೀಸರು ಮತ್ತು ಇತರರು ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್ಗಾಗಿ ತಾಲೀಮು ನಡೆಸುತ್ತಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವ ಆಚರಣೆಗಳು ಪ್ರಧಾನಮಂತ್ರಿಯವರ ‘ಜನ ಭಗೀತರಿ’ ಥೀಮ್ ಅನ್ನು ಪ್ರತಿಬಿಂಬಿಸುತ್ತಿದೆ ಎಂದು ರಕ್ಷಣಾ ಕಾರ್ಯದರ್ಶಿ ಕೃತರ್ ಅರಮನೆ ತಿಳಿಸಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದ ಇಂದಿನವರೆಗೆ ಗಣರಾಜ್ಯೋತ್ಸವದಂದು ಭಾರತದ ಮುಖ್ಯ ಅತಿಥಿಗಳಾಗಿರುವ ಎಲ್ಲ ಅತಿಥಿಗಳ ಹೆಸರನ್ನು ಹೇಳಲಿದ್ದೇವೆ. ಈ ವರ್ಷ (2023) ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.
ಈ ವರ್ಷ ಗಣರಾಜ್ಯೋತ್ಸವ ಆಚರಣೆಗಳು ಪರಿಷ್ಕೃತ ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿ ನಡೆಯಲಿದ್ದು, ಸರ್ಕಾರವು ಜನಸಾಮಾನ್ಯರಿಗಾಗಿ ಆನ್ಲೈನ್ನಲ್ಲಿ 32,000 ಟಿಕೆಟ್ಗಳನ್ನು ಮಾರಾಟಕ್ಕೆ ಇರಿಸಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Amazon Great Republic Day Sale 2023: ಸೇಲ್ನಲ್ಲಿ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಲಾಗುತ್ತಿದೆ. ವಿಶೇಷವೆಂದರೆ ಅಮೆಜಾನ್ ಸೇಲ್ನಲ್ಲಿ ಐಫೋನ್ ಸೇರಿದಂತೆ ದುಬಾರಿ ಸ್ಮಾರ್ಟ್ಫೋನ್ಗಳು ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.