Lakshmi Hebbalkar: ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
Karnataka Budget 2024 Live Updates: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ 15ನೇ ಬಜೆಟ್ ಆಗಿದ್ದು, ದಾಖಲೆ ನಿರ್ಮಿಸಿದ್ದಾರೆ. ತಮ್ಮ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಯಾವ್ಯಾವ ಇಲಾಖೆಗೆ ಏನು ಕೊಡುಗೆ ನೀಡಿದ್ದಾರೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
Eshwara Khandre: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
Karnataka Budget 2024 Live Updates: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.ಇತ್ತು. ಈ ಬಾರಿ 3.71 ಲಕ್ಷ ಕೋಟಿ ರೂ. ತಲುಪಿದೆ. ಕಳೆದ ಬಜೆಟ್ನಲ್ಲಿ ಸರ್ಕಾರವು 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.