IPS ಅಧಿಕಾರಿ ಡಿ.ರೂಪಾ ಸಾಮಾಜಿಕ ಕಾರ್ಯಕರ್ತ ಗಂಗರಾಜು ಜೊತೆ ಮಾತನಾಡಿದ್ದಾರೆ ಎನ್ನಲಾಗಿರೋ ಆಡಿಯೋ ಒಂದು ಹರಿದಾಡುತ್ತಿದೆ.. ಆಡಿಯೋದಲ್ಲಿ ಡಿ.ರೂಪಾ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ರೋಹಿಣಿ-ರೂಪಾ ಕಿತ್ತಾಟ ದಿನೇ ದಿನೆ ತಾರಕಕ್ಕೇರುತ್ತಿದೆ.. ಫೋಟೋ, ಟಾಕ್ವಾರ್ ಬೆನ್ನಲ್ಲೇ ಈಗ ಡಿ.ರೂಪಾ ಸಂಭಾಷಣೆ ವೈರಲ್ ಆಗಿದೆ. ಸಾಮಾಜಿಕ ಕಾರ್ಯಕರ್ತ ಗಂಗರಾಜು ಜೊತೆ ರೂಪಾ ಮಾತಾಡಿದ್ದಾರೆ ಎನ್ನಲಾದ ಆಡಿಯೋ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟಿದೆ..
D Roopa face book post :ಇನ್ನೂ ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಇನ್ನೂ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಎಂದು ಪೋಸ್ಟ್ ನಲ್ಲಿ ಹೇಳಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಬ್ಬರು ಅಧಿಕಾರಿಗಳ ಜಗಳ ತಾರಕಕ್ಕೇರಿದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನಿನ್ನೆ ಮುಖ್ಯ ಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನು ಕರೆದು ಶಿಸ್ತು ಕಾಪಾಡಿಕೊಳ್ಳುವಂತೆ ತಿಳಿಸಿದ್ದರು. ಇದರ ಬೆನ್ನಲ್ಲೆ ಇಂದು ವರ್ಗಾವಣೆ ಮಾಡಲಾಗಿದೆ.
Kannada Govt Issued Notice Against Officers: ಇಬ್ಬರೂ ಅಧಿಕಾರಿಗಳ ಈ ವರ್ತನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ಈ ನೋಟಿಸ್ ಜಾರಿ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.